ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಅಗತ್ಯ: ಪುನರುಚ್ಚರಿಸಿದ ಹೆಚ್.ಡಿ. ಕುಮಾರಸ್ವಾಮಿ

Teaching of Bhagavad Gita in schools is necessary: ​​H.D. Kumaraswamy reiterates

ಕೆ.ಎಂ. ಸಂತೋಷ್. ಆರೂಢಿ (ದೊಡ್ಡಬಳ್ಳಾಪುರ): ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಪುನರುಚ್ಚರಿಸಿದ್ದಾರೆ.

ನವದೆಹಲಿಯಲ್ಲಿ ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಹಾಗೂ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಮತ್ತು ಸಾಧನೆ ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಗವದ್ಗೀತೆಯನ್ನು ಬೋಧಿಸಬೇಕು ಎಂದು ಎಂದು ನಾನು ಹೇಳಿದ್ದು ರಾಜಕೀಯ ಉದ್ದೇಶ ಅಥವಾ ಯಾವುದೇ ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ. ಉತ್ತಮ ಸಮಾಜ ನಿರ್ಮಾಣ ಮಾಡುವ ಅಗತ್ಯದ ದೃಷ್ಟಿಯಿಂದ ಹೇಳಿದ್ದೇನೆ ಎಂದು ಅವರು ಒತ್ತಿ ಹೇಳಿದರು.

ಭಗವದ್ಗೀತೆಯ ಉದಾತ್ತ, ಶ್ರೇಷ್ಟ ಮೌಲ್ಯಗಳ ಬಗ್ಗೆ ಹೊಸದಾಗಿ ತಿಳಿಹೇಳುವ ಅಗತ್ಯವಿಲ್ಲ. ಆದರೆ ಷಸಮಾಜದಲ್ಲಿ ನೈತಿಕ ಮೌಲ್ಯಗಳು ಅಧಃಪತನ ಆಗುತ್ತಿರುವ ಸಂದರ್ಭದಲ್ಲಿ ಗೀತೆಯ ಅಗತ್ಯ ಇನ್ನೂ ಹೆಚ್ಚಿದೆ. ಮಾನವ ಕುಲಕ್ಕೆ ಕೃಷ್ಣನ ಉಪದೇಶವು ದಾರಿದೀಪವಾಗಿದೆ. ಹೀಗಾಗಿ ಮಕ್ಕಳಿಗೆ ಬೋಧಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದೇನೆ.

ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವಂತೆ ಕೋರಿ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರವನ್ನು ಕೂಡ ಬರೆದಿದ್ದೇನೆ. ಅದನ್ನೇ ಕೆಲವರು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಅವರು ನುಡಿದರು.

ನಮಗೆ ಎಲ್ಲವೂ ಇದೆ, ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಬೆಳೆಯುತ್ತಿದ್ದೇವೆ. ಆದರೆ ಮೌಲ್ಯಗಳ ವಿಷಯಕ್ಕೆ ಬಂದಾಗ ಪಾತಾಳಕ್ಕೆ ಹೋಗುತ್ತಿದ್ದೇವೆ. ಯಾಕೆ ಹೀಗೆ ಆಗುತ್ತಿದೆ ಎಂಬುದನ್ನು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಇವತ್ತು ಯಾರೇ ಆದರೂ ನೆಮ್ಮದಿಯಾಗಿ ನಿದ್ರೆ ಮಾಡುವ ಪರಿಸ್ಥಿತಿ ಇಲ್ಲ. ಅಂಥ ಪ್ರಾಮಾಣಿಕತೆಯನ್ನು ಯಾರೂ ಹೊಂದಿಲ್ಲ. ಹಾಗಾದರೆ ಮುಂದಿನ ತಲೆಮಾರಿಗೆ ಏನು ಕೊಡಬೇಕು ಎಂಬುದನ್ನು ಪೋಷಕರಢ ತೀರ್ಮಾನ ಮಾಡಬೇಕು ಎಂದು ಸಚಿವರು ಸೂಚ್ಯವಾಗಿ ಹೇಳಿದರು.

ಮಾನವೀಯ ಮೌಲ್ಯಗಳು, ತಾಯಿ ಹೃದಯ ಎಲ್ಲರಿಗೂ ಅಗತ್ಯ. ಈ ಮೌಲ್ಯಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸಚಿವರು ವಿನಂತಿಸಿದರು.

ಕುವೆಂಪು ಅವರಿಗೆ ಭಾರತ ರತ್ನ ಸಿಗಲಿ

ಕುವೆಂಪು ಅವರು ರಾಷ್ಟ್ರಕವಿಯಷ್ಟೇ ಅಲ್ಲ, ಅವರು ವಿಶ್ವಕವಿ. ಮನುಕುಲದ ಒಳಿತಿಗಾಗಿ ಸಾಹಿತ್ಯ ರಚಿಸಿದ ಅವರು, ಯುಗದ ಕವಿಯೂ ಆಗಿದ್ದಾರೆ. ಅಂಥ ಶ್ರೇಷ್ಟರಿಗೆ ಭಾರತ ರತ್ನ ಸಿಗಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಕುವೆಂಪು ಅವರ ಸಾಹಿತ್ಯವನ್ನು ನಾನು ಓದಿದ್ದೇನೆ. ಮುಖ್ಯವಾಗಿ ಅವರ ಎರಡು ಕಾದಂಬರಿಗಳ ಜತೆಗೆ, ಅವರ ಆತ್ಮಕಥನ ʼನೆನಪಿನ ದೋಣಿಯಲ್ಲಿʼ ಶ್ರೆದ್ಧೆಯಿಂದ ಓದಿದ್ದೇನೆ. ಆ ಕೃತಿಯನ್ನು ಕುವೆಂಪು ಅವರು ಹೃದಯದಿಂದ ಬರೆದಿದ್ದಾರೇನೋ ಅನ್ನುವಷ್ಟು ಅನನ್ಯವಾಗಿದೆ ಎಂದು ಅಬಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿಗಳು, ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಮುಕ್ತಿದಾನಂದ ಜೀ ಮಹಜಾಜ್‌ ಅವರು, ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಮಹಾಸ್ವಾಮೀಜಿಗಳು, ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿಗಳು, ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರುಗಳು ದಿವು ಸಾನ್ನಿಧ್ಯ ವಹಿಸಿದ್ದರು.

ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದರಾದ ಡಾ. ಸಿ.ಎನ್.‌ ಮಂಜುನಾಥ್‌, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ನಾಗರಾಜ್‌, ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಹೆಚ್.ಕೆ. ರಾಮು ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]