Doddaballapura: Pawan murder case.. Deadly weapons seized, accused sent to jail

ದೊಡ್ಡಬಳ್ಳಾಪುರ: ಪವನ್ ಕೊಲೆ ಪ್ರಕರಣ.. ಲಾಂಗ್, ಮಚ್ಚು ಸೇರಿ ಮಾರಕಾಸ್ತ್ರಗಳು ವಶ.. ಆರೋಪಿಗಳು ಜೈಲಿಗೆ

ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜು (Jalappa Technical College) ವಸತಿ ಗೃಹದಲ್ಲಿ ವಾಸವಿದ್ದ ಪವನ್ ಎಂಬ ಯುವಕನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (murder) ಘಟನೆ ಕುರಿತು, ನಗರ ಠಾಣೆ ಪೊಲೀಸರು ಬಂಧಿಸಿದ್ದ ಓರ್ವ ಬಾಲಕನನ್ನು ದೇವನಹಳ್ಳಿ ನಿಗಾ ಘಟಕಕ್ಕೆ, ಉಳಿದ ನಾಲ್ವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಬಂಧಿತ ಆರೋಪಿಗಳನ್ನು ಮಲ್ಲತ್ ಹಳ್ಳಿ ನಿವಾಸಿ ಸಂದೀಪ್ ( 32 ವರ್ಷ), ಸಿದ್ದೇನಾಯಕನಹಳ್ಳಿ ನಿವಾಸಿಗಳಾದ ಉದಯ್ (23 ವರ್ಷ), ಹೇಮಂತ್ (22 ವರ್ಷ), ಮಂಜು (24 ವರ್ಷ) ಹಾಗೂ ಓರ್ವ ಅಪ್ರಾಪ್ತ ಬಾಲಕ.

ಕಳೆದ ಡಿ.4 ರಂದು ರಾತ್ರಿ 9.30 – 10 ಗಂಟೆ ನಡುವಿನ ಸಮಯದಲ್ಲಿ ದೊಡ್ಡಬಳ್ಳಾಪುರದ ಡಿಕ್ರಾಸ್ ಮತ್ತು ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಸಮೀಪ ಕಾರಿನಲ್ಲಿ ಬಂದ ಈ ಆರೋಪಿಗಳು, ಪವನ್ ತೆರಳುತ್ತಿದ್ದ ಆಟೋ ತಡೆದು ರಾಜ್ಯ ಹೆದ್ದಾರಿಯಲ್ಲಿಯೇ ಬರ್ಬರ ಹತ್ಯೆ ನಡೆಸಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಕೆಆರ್ ಪುರಂನಲ್ಲಿ ತಾವು ಬಂದಿದ್ದ ಕಾರನ್ನು ನಿಲ್ಲಿಸಿ, ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.

ಈ ಕುರಿತಂತೆ ಆರೋಪಿಗಳನ್ನು ಬೆನ್ನತ್ತಿದ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ನೇತೃತ್ವದ ಪೊಲೀಸರು, ಸಿಸಿ ಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗೆ ಪೊಲೀಸರ ವಶಕ್ಕೆ ನೀಡಿದ್ದರು‌.

ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಗಳು ಕೃತ್ಯಕ್ಕೆ ಬಳಸಿ ಬೂದಗೆರೆ ಬಳಿ ಎಸೆದಿದ್ದ ಎರಡು ಲಾಂಗ್, ಒಂದು ಮಚ್ಚು ಹಾಗೂ ಒಂದು ಚಾಕು ಅನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ 4 ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಗೂ ಅಪ್ರಪ್ತ ಬಾಲಕನನ್ನು ದೇವನಹಳ್ಳಿಯ ಅಪ್ರಾಪ್ತ ಆರೋಪಿಗಳ ನಿಗಾ ಘಟಕದ ವಶಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!