
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli Town Panchayat Election) ಅಂಗವಾಗಿ ಇಂದು ಎಳ್ಳುಪುರ (ವಾರ್ಡ್ ಸಂಖ್ಯೆ 7) ಗ್ರಾಮದ ಜೆಡಿಎಸ್ ( JDS) ಅಭ್ಯರ್ಥಿ ಪರವಾಗಿ ಇಂದು ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಮುನೇಗೌಡ ಮಾತನಾಡಿ, ” ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಸೇರಿದಂತೆ ಜನಸಾಮಾನ್ಯರ ಪರವಾಗಿ ಮಾಡಿರುವ ಐತಿಹಾಸಿಕ ಕೆಲಸಗಳೇ ಈ ಚುನಾವಣೆಯಲ್ಲಿ ನಮ್ಮ ಕೈ ಹಿಡಿಯಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ. ವಿಜಯ್ ಕುಮಾರ್ ಮಾತನಾಡಿ, “ಈ ಬಾರಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಗ್ರಾಮದ ಮೂಲಭೂತ ಸೌಕರ್ಯಗಳಾದ ಸುಸಜ್ಜಿತ ರಸ್ತೆ, ಚರಂಡಿ ವ್ಯವಸ್ಥೆ (Drainage) ಹಾಗೂ ಯು.ಜಿ.ಡಿ (UGD) ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು. ಪಂಚಾಯಿತಿಯ ಆಡಳಿತವನ್ನು ಜನಸ್ನೇಹಿಯಾಗಿಸುವುದು ನಮ್ಮ ಸಂಕಲ್ಪ” ಎಂದು ಭರವಸೆ ನೀಡಿದರು.
ಈ ವೇಳೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಲಕ್ಷ್ಮೀಪತಯ್ಯ, ವಕ್ತಾರ ಕುಂಟನಹಳ್ಳಿ ಮಂಜುನಾಥ್, ಮುಖಂಡರಾದ ದೇವರಾಜ್ ಶಿವಕುಮಾರ್, ದೊಡ್ಡಬಳ್ಳಾಪುರ ನಾಗರಾಜ್, ಜಗನ್ನಾಥಾಚಾರ್, ರಾಮದಾಸ್, ಮಧು ಯೆಳ್ಳುಪುರ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಭಾಗವಹಿಸಿದ್ದರು.