No more land acquisition in Channarayapatna hobli: M.B.Patil

2ನೇ ವಿಮಾನ ನಿಲ್ದಾಣ.. ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ: ಎಂ.ಬಿ. ಪಾಟೀಲ

ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು `ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್’ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ (M.B. Patila) ಶುಕ್ರವಾರ ಹೇಳಿದ್ದಾರೆ.

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.

ದೇವನಹಳ್ಳಿಯ ಸಮೀಪದಲ್ಲಿ ಈಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಕ್ರಿಯವಾಗಿದೆ. ಇದು ಆರಂಭವಾಗುವಾಗಲೇ 2033ರವರೆಗೂ 150 ಕಿ.ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಾರದೆಂಬ ಷರತ್ತು ಇದೆ.

ಏತನ್ಮಧ್ಯೆ ಹೊಸದೆಹಲಿ ಮತ್ತು ನವೀ ಮುಂಬೈಗಳಲ್ಲಿ ಇಂತಹ ಷರತ್ತುಗಳನ್ನು ಸಡಿಲಿಸಿ, ಎರಡನೆಯ ಏರ್ಪೋರ್ಟುಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಸಂದರ್ಭ ನೋಡಿಕೊಂಡು ಬಗೆಹರಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಒಂದು ವಿಮಾನ ನಿಲ್ದಾಣ ಬರಬೇಕೆಂದರೆ ಸ್ಥಳದ ಆಯ್ಕೆ, ಅದರ ಪರಿಶೀಲನೆ, ಭೂಸ್ವಾಧೀನ, ಪರಿಹಾರ ವಿತರಣೆ ಮುಂತಾದ ಅಂಶಗಳು ಮುಖ್ಯವಾಗುತ್ತವೆ. ಇವೆಲ್ಲವನ್ನೂ ಮುಗಿಸಿಕೊಳ್ಳಲು ಏನಿಲ್ಲವೆಂದರೂ ಐದಾರು ವರ್ಷಗಳು ಬೇಕಾಗುತ್ತವೆ.

ಬಿಐಎಎಲ್ ಅನುಮತಿ ಬೇಕಾಗುವುದು ಇವೆಲ್ಲ ಮುಗಿದ ಮೇಲಷ್ಟೆ. ಹೀಗಾಗಿಯೇ ಈಗ ಕರ್ನಾಟಕ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ಮೂಲಕ ಸ್ಥಳದ ಅನುಕೂಲ, ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿಯ ಉದ್ದೇಶಕ್ಕಾಗಿ ಟೆಂಡರ್ ಕರೆಯಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ವರದಿಯನ್ನು ಸರಕಾರಕ್ಕೆ ಸಲ್ಲಿಸಲು 5 ತಿಂಗಳ ಕಾಲಾವಕಾಶ ಕೊಡಲಾಗುವುದು. ಇದನ್ನು ಸಿದ್ಧಪಡಿಸುವಾಗ ಪ್ರಯಾಣಿಕರ ದಟ್ಟಣೆ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಇರುವ ಅವಕಾಶ, ಮೂಲಸೌಕರ್ಯ, ಭೌಗೋಳಿಕ ಲಕ್ಷಣಗಳು, ಮಳೆಯ ಪ್ರಮಾಣ, ಒಳಚರಂಡಿ, ಶಬ್ದ ಮಾಲಿನ್ಯ, ತ್ಯಾಜ್ಯ ನಿರ್ವಹಣೆ ಮುಂತಾದ ಅಂಶಗಳನ್ನು ಪರಿಗಣಿಸಬೇಕಾಗುತ್ತದೆ.

ಇದೇನೇ ಇದ್ದರೂ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂಬುದನ್ನು ಸರಕಾರ ಮನಗಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ಇರುವ ಮತ್ತೊಂದು ಸ್ಥಳವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ತಂಡ ಪರಿಶೀಲಿಸಿ, ತನ್ನ ವರದಿಯನ್ನು ನಮಗೆ ನೀಡಿದೆ. ಇದಾದ ನಂತರವೇ ಈಗ ಟೆಂಡರ್ ಆಹ್ವಾನಿಸಲಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ವಿಮಾನ ಪತನ; ನಾಸ್ಕರ್‌ನ ಮಾಜಿ ಚಾಲಕ, ಅವರ ಕುಟುಂಬ ಸೇರಿದಂತೆ ಏಳು ಸಾವು

ವಿಮಾನ ಪತನ; ನಾಸ್ಕರ್‌ನ ಮಾಜಿ ಚಾಲಕ, ಅವರ ಕುಟುಂಬ ಸೇರಿದಂತೆ ಏಳು ಸಾವು

ಉತ್ತರ ಕೆರೊಲಿನಾದ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ (Plane crash) ಸಾವನ್ನಪ್ಪಿದ ಏಳು ಜನರಲ್ಲಿ ಮಾಜಿ ನಾಸ್ಕರ್ ಚಾಲಕ ಮತ್ತು ಅವರ ಕುಟುಂಬ ಸೇರಿದೆ ಎಂದು ಕಾರು ರೇಸಿಂಗ್ ಸಂಸ್ಥೆ ತಿಳಿಸಿದೆ.

[ccc_my_favorite_select_button post_id="117528"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!