CM Siddaramaiah is a complete liar, there is a split in the party: R. Ashoka

ಸಿಎಂ ಸಿದ್ದರಾಮಯ್ಯ ಅಪ್ಪಟ ಸುಳ್ಳುಗಾರ, ಪಕ್ಷದಲ್ಲಿ ಒಡಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತರ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ. ಕೇವಲ ಸುಳ್ಳುಗಳನ್ನೇ ಹೇಳಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಈ ಬಾರಿ ಬಿಜೆಪಿಯಿಂದ ಈ ಬಗ್ಗೆ ಒತ್ತು ನೀಡಲಾಗಿತ್ತು. ಒಟ್ಟು 21 ಗಂಟೆಗಳ ಕಾಲ ಚರ್ಚೆಯಾದರೂ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ.

ಹದಿನಾರು ಬಾರಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎನ್ನುತ್ತಾರೆ ಎಂದರೆ ಅದು ಅವರದ್ದೇ ವಿಫಲತೆ.

ಲೋಕೋಪಯೋಗಿ, ನೀರಾವರಿ ಸಚಿವರು ಇದ್ದರೂ ಉತ್ತರ ಕರ್ನಾಟಕದ ರಸ್ತೆಗಳಲ್ಲಿ ಗುಂಡಿಗಳಿವೆ. ಪ್ರತಿ ವರ್ಷ 10,000 ಕೋಟಿ ರೂ. ನೀಡಲಾಗುವುದು ಎಂದು ಹೇಳಿ, ನಂತರ ಇಡೀ ರಾಜ್ಯಕ್ಕೆ ಎಂದು ಸುಳ್ಳು ಹೇಳುತ್ತಾರೆ ಎಂದರು.

ನೀರಾವರಿ ಯೋಜನೆಗಳ ಬಗ್ಗೆ ಮೊದಲು ಭರವಸೆಗಳನ್ನು ನೀಡಿ, ನಂತರ ಕೋರ್ಟ್‌ನಲ್ಲಿ ತಡೆಯಾಜ್ಞೆ ಇದೆ ಎನ್ನುತ್ತಾರೆ. ಗೋವಿಂದರಾವ್‌ ಆಯೋಗದ ವರದಿ ಇನ್ನೂ ಪೂರ್ಣಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಅಪ್ಪಟ ಸುಳ್ಳುಗಾರನಾಗಿ ಸುಳ್ಳುಗಳನ್ನು ಹೇಳಿದ್ದಾರೆ.

ಮುಖ್ಯಮಂತ್ರಿ ಹೊಸದೇನೋ ಘೋಷಣೆ ಮಾಡುತ್ತಾರೆ ಎಂದು ಜನರು ಅಂದುಕೊಂಡಿದ್ದರು. ಆದರೆ ಅಲ್ಲಿ ವಿದ್ಯುತ್‌ ಇಲ್ಲದಂತೆ ಮಾಡಿ ಇಡೀ ಉತ್ತರ ಕರ್ನಾಟಕದ ಬೆಳಕು ಕಸಿದುಕೊಂಡಿದ್ದಾರೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಆರೋಪಗಳನ್ನು ಮಾತ್ರ ಮಾಡಿದ್ದಾರೆ.

ಕೇಂದ್ರದ ರೈಲ್ವೆ ಯೋಜನೆಗೆ ಭೂಮಿ ನೀಡಿಲ್ಲ, ಕಸ ನಿರ್ವಹಣೆ ಯೋಜನೆಗೆ ತಮ್ಮ ಪಾಲನ್ನೇ ನೀಡಿಲ್ಲ. ಎಲ್ಲಮ್ಮ ದೇವಾಲಯ ಯೋಜನೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುದಾನ ನೀಡಿದ್ದರೂ ಆರಂಭ ಮಾಡಿಲ್ಲ. ಬೆಳಗಾವಿಯ ಕೆರೆಗಳಿಗೆ ಸುಮಾರು 50 ಕೋಟಿ ರೂ. ನೀಡಿದ್ದರೂ ಅದನ್ನು ಬಳಸಿಲ್ಲ.

ಜಲಜೀವನ್‌ ಮಿಷನ್‌ ಯೋಜನೆಯ ಹಣ ಬಿಡುಗಡೆ ಬಗ್ಗೆ ಕಾಂಗ್ರೆಸ್‌ ಸಂಸದರು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದು, ಬಿಲ್‌ ಸಲ್ಲಿಸಿ ಎಂಬ ಉತ್ತರ ಬಂದಿದೆ. ಸಿಸಿ ಪಾಟೀಲ್‌ ಸಮಿತಿಗೆ ಅಧಿಕಾರಿಗಳು ಉತ್ತರ ನೀಡಿದ್ದು, ಬಿಲ್‌ ಸಲ್ಲಿಸಲು ಆಗಿಲ್ಲ ಎಂದಿದ್ದಾರೆ ಎಂದರು.

ಇಷ್ಟೆಲ್ಲ ಆದಮೇಲೂ ಅಭಿವೃದ್ಧಿ ಮಾಡಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿಕೊಳ್ಳುತ್ತಾರೆ. ಗೃಹಲಕ್ಷ್ಮಿ ಹಣದ ಬಗ್ಗೆ ನಮ್ಮ ಶಾಸಕರು ಪ್ರಶ್ನೆ ಕೇಳಿದರೆ ಅದಕ್ಕೆ ಉತ್ತರ ನೀಡಿಲ್ಲ. 5,000 ಕೋಟಿ ರೂ. ಎಲ್ಲಿಗೆ ಹೋಗಿದೆ ಎಂದು ಕೇಳಿದರೆ, ಆ ಬಗ್ಗೆ ಉತ್ತರ ಕೊಟ್ಟಿಲ್ಲ.

ಇದು ಸಾಲಗಾರರ ಸರ್ಕಾರವಾಗಿದ್ದು, ಭ್ರಷ್ಟಾಚಾರ ಮಾಡಿ ಲೂಟಿ ಮಾಡಿಕೊಂಡು ಹೋಗುತ್ತಿದೆ. ಈ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಇನ್ನಷ್ಟು ಕೆಟ್ಟದೇ ಆಗಿದೆ. ಶಾಸಕರು ಡಿನ್ನರ್‌ ಪಾರ್ಟಿ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ.

ಒಡಕು ಇಲ್ಲವೆಂದರೆ ಮುಖ್ಯಮಂತ್ರಿ ಸದನದಲ್ಲಿ ಭಾಷಣ ಮಾಡುವಾಗ ಎಲ್ಲರೂ ಇರಬೇಕಿತ್ತು. ಆದರೆ ಕೇವಲ 6 ಸಚಿವರಿದ್ದರು. ಶೇ.50 ರಷ್ಟು ಶಾಸಕರು ಇರಲೇ ಇಲ್ಲ. ಇಲ್ಲಿ ಮುಖ್ಯಮಂತ್ರಿಗೆ ಗ್ಯಾರಂಟಿ ಇಲ್ಲ. ಈ ಸರ್ಕಾರ ಉತ್ತರ ಕರ್ನಾಟಕಕ್ಕೆ ಚೊಂಬು ನೀಡಿದೆ ಎಂದು ದೂರಿದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!