The fight between the supporters of CM Siddaramaiah and DCM D.K. Shivakumar is fierce at the national level..!

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

ಮಂಗಳವಾರ ದೆಹಲಿಗೆ ಪ್ರಯಾಣ

ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ.

ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ ಎಂದು ತಿಳಿಸಿದರು.

ನಾಗಸಾಧುಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, ಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ.

ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು. ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!