
ದೊಡ್ಡಬಳ್ಳಾಪುರ: ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.
ವಿಷಯ ತಿಳಿದ ದೊಡ್ಡಬೆಳವಂಗಲ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಅಗ್ನಿ ಶಾಮಕ ಸಿಬ್ಬಂದಿಗಳ ನೆರವಿನೊಂದಿಗೆ ಮೃತ ದೇಹವನ್ನು ಹೊರಕ್ಕೆ ತೆಗೆದರು.
ಮೃತನ ಬಳಿ ಇದ್ದ ಮೊಬೈಲ್ ಮೂಲಕ ಪರಿಶೀಲನೆ ನಡೆಸಿದಾಗ ಬೆಂಗಳೂರಿನ ಎಂಎಸ್ ಪಾಳ್ಯದ ನಿವಾಸಿ ಸುಮಾರು 59 ವರ್ಷದ ಮೊಣ್ಣಯ್ಯ ಮುತ್ತು ಎಂದು ಗುರುತಿಸಲಾಗಿದೆ.
ಈ ಕುರಿತಂತೆ ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.