18th anniversary celebration at MSV Public School, Doddaballapur

ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ 18ನೇ ವಾರ್ಷಿಕೋತ್ಸವ ಸಂಭ್ರಮ: ಆಪರೇಶನ್ “ಸಿಂಧೂರ್‌ಗೆ” ಗೌರವ

ದೊಡ್ಡಬಳ್ಳಾಪುರ; ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) 18ನೇ ಶಾಲಾ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಭಾರತೀಯ ರಕ್ಷಣಾ ಪಡೆಯ ಹೆಗ್ಗುರುತಾದ ಆಪರೇಶನ್ ಸಿಂಧೂರ್ ನ ಗೌರವ ಸೂಚಕವಾಗಿ ಈ ಬಾರಿಯ ವಾರ್ಷಿಕೋತ್ಸವವನ್ನು ಸಿಂಧೂರ್ ಎಂದು ಹೆಸರಿಡಲಾಗಿತ್ತು.

ಈ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಿಶ್ವನಾಥ ರಾವ್ ಬೀಡು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪಠ್ಯದ ಜೊತೆಗೆ ಶಿಕ್ಷಣದಲ್ಲಿ ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅತ್ಯಗತ್ಯ. ಇವು ಕೇವಲ ಓದಷ್ಟೇ ಅಲ್ಲದೆ, ನಾಯಕತ್ವ, ಸಮಯ ನಿರ್ವಹಣೆ, ಸಾಮಾಜಿಕ, ಮತ್ತು ಸೃಜನಾತ್ಮಕ ಕೌಶಲ್ಯಗಳನ್ನು ಬೆಳೆಸುತ್ತವೆ, ಶೈಕ್ಷಣಿಕ ಅಂಕಗಳನ್ನು ಸುಧಾರಿಸುತ್ತವೆ, ಮತ್ತು ವಿದ್ಯಾರ್ಥಿಗಳನ್ನು ಆತ್ಮವಿಶ್ವಾಸವುಳ್ಳ, ಆರೋಗ್ಯಕರ ವ್ಯಕ್ತಿಗಳಾಗಿ ರೂಪಿಸುತ್ತವೆ, ಶಿಕ್ಷಣದ ಉದ್ದೇಶವನ್ನು ಪಠ್ಯದ ಗಡಿಗಳನ್ನು ಮೀರಿ ವಿಸ್ತರಿಸುತ್ತವೆ.

ಮಕ್ಕಳಲ್ಲಿರುವ ಹವ್ಯಾಸವನ್ನು ಗುರುತಿಸಿ ಅವರಿಗೆ ಬೆಂಬಲವಾಗಿ ನಿಂತಲ್ಲಿ ಮಕ್ಕಳ ಸರ್ವತೋಮುಖ ಏಳಿಗೆಗೆ ಕೈಜೋಡಿಸಬೇಕೆಂದು ಪೋಷಕರಿಗೆ ತಿಳಿಸಿದರು.

ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸಿರುವಂತೆ, ನಮ್ಮ ಕ್ರೀಡಾ ಚಟುವಟಿಕೆಗಳು ನಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಎಂದು ಮನದಟ್ಟು ಮಾಡಿಸಿದರು.

ಶೈಕ್ಷಣಿಕ ಪ್ರಗತಿಯ ಜೊತೆಗೆ ಕ್ರೀಡೆಗೆ ಬೆಂಬಲ ನೀಡುತ್ತಾ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುತ್ತಿರುವ ಎಂಎಸ್‌ವಿ ಶಾಲೆಯ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಇಂದು ನಾವು ಜಾಗತೀಕರಣ ಯುಗದಲ್ಲಿ ಜೀವಿಸುತ್ತಿದ್ದೇವೆ‌. ವಿಜ್ಞಾನ ತಂತ್ರಜ್ಞಾನ ದಲ್ಲಿ ಆದ ಹೊಸ ಹೊಸ ಆವಿಷ್ಕಾರಗಳಿಂದಾಗಿ ಇವತ್ತು ಅಂಗೈಯಲ್ಲಿ ಪ್ರಪಂಚ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಕು, ಬೇಡದ್ದವೆಲ್ಲ ಮೊಬೈಲ್ ನಲ್ಲಿಯೇ ನೋಡಬಹುದು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೇವಲ ಜ್ಞಾನ ಸಂಪಾದನೆಗಾಗಿ ಮಾತ್ರ ಮೊಬೈಲ್ ಅನ್ನು ಬಳಸಬೇಕು ಎಂಬ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಕಳೆದ ವರ್ಷದ ಸಿಬಿಎಸ್‌ಇ ಹತ್ತನೆಯ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ 19 ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೇ ಅತಿ ಹೆಚ್ಚು ಅಂಕಗಳಿಸಿದ ಗಿರೀಶ್ ಚಂದ್ರ ಡಿ,ಕೆ. ತನ್ನ ಅನುಭವಗಳನ್ನು ಹಂಚಿಕೊಂಡನು.

ಟೇಕ್ವಾಂಡೋ ಹಾಗೂ ಯೋಗಾಸನದಲ್ಲಿ ಸಾಧನೆಗೈದ ಐದು ಮಕ್ಕಳನ್ನೂ ಸಹ ಸನ್ಮಾನಿಸಲಾಯಿತು.

ಮಕ್ಕಳು ಆಕರ್ಷಕವಾದ ಟ್ರೋಫಿ ಮತ್ತು ಪ್ರಮಾಣ ಪತ್ರಗಳನ್ನು ಅತಿಥಿಗಳಿಂದ ಪಡೆದು ಸಂಭ್ರಮಿಸಿದರು.

2025-26ನೇ ಸಾಲಿನ ಶಾಲೆಯ ಕಾರ್ಯವೈಖರಿಗೆ ಹಾಗೂ ಶಾಲಾ ಚಟುವಟಿಕೆಗಳು ಮತ್ತು ಸಾಧನೆಗಳ ಕೈಪಿಡಿ “ವಾರ್ಷಿಕ ಶಾಲಾ ವರದಿ” ಯನ್ನು ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಅವರು ಮಂಡಿಸಿದರು.

ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಶಿಸ್ತು, ಸಂಸ್ಕಾರ ಕಲಿಸಿ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಬಲ್ಲ ಉತ್ತಮ ಪ್ರಜೆಗಳ ನಿರ್ಮಾಣವೇ ನಮ್ಮ ಸಂಕಲ್ಪ. ಈ ನಿಟ್ಟಿನಲ್ಲಿ ನಾವು ಸದಾ ಅಚಲವಾಗಿ ಶ್ರಮಿಸುತ್ತೇವೆ. ಈ ನಿಟ್ಟಿನಲ್ಲಿ ಎಂದಿನಂತೆ ಪೋಷಕರ ಸಹಕಾರ ಮುಖ್ಯ ಪಾತ್ರ ವಹಿಸುತ್ತದೆ ಎಂದು ಈ ವೇಳೆ ಅವರು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ, ವಿಚಾರ, ಜನಪದ, ಸಾಹಿತ್ಯ, ಸಿನಿಮಾ ಮೊದಲಾದಗಳಿಗೆ ಸಂಬಂಧಪಟ್ಟಂತೆ ಆಯೋಜಿಸಲಾಗಿದ್ದ ಆಕರ್ಷಕವಾದ ನೃತ್ಯ ಕಾರ್ಯಕ್ರಮ ಸಂಜೆಯನ್ನು ಇನ್ನಷ್ಟು ರಸಸಂಜೆಗೊಳಿಸಿತು.

ಸತ್ಯಯುಗ, ತ್ರೇತಾಯುಗ, ದ್ವಾಪರ ಯುಗ ಹಾಗೂ ಕಲಿಯುಗಗಳನ್ನು ಪ್ರತಿನಿಧಿಸುವ ಸ್ವಾಗತನೃತ್ಯ “ಕಾಲಚಕ್ರ” ಕಾರ್ಯಕ್ರಮದ ಕಲಶವಿಟ್ಟಂತೆ ಇತ್ತು.

ಚೈನೀಸ್ ವಿಶೇಷ ನೃತ್ಯ, ಮಹಿಷಾಸುರ ಮರ್ದಿನಿ (ಅಯ್ಯಪ್ಪ ಸ್ವಾಮಿ), ಆಪರೇಷನ್ ಸಿಂಧೂರ್, ಪರಿಸರ ಸಂರಕ್ಷಣೆಯ ಕಾಳಜಿ ಯ ಕಾಂತಾರ, ಕ್ರಿಸ್ ಮಸ್, ಜಾನಪದ ಸಂಗಮ, ರೆಟ್ರೋ ರಾಗ, ನೇಪಾಳಿ ನೃತ್ಯ, ದಕ್ಷಿಣ ಭಾರತದ ಭಾಷಾ ಸಂಗಮ ಹೀಗೆ ವೈವಿದ್ಯತೆಯಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಪೋಷಕರನ್ನು ರಂಜಿಸಿತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಪೋಷಕರು ಸಹ ವೇದಿಕೆಯ ಮೇಲೆ ತಮ್ಮ ತಮ್ಮ ಮಕ್ಕಳ ಪ್ರತಿಭೆಯನ್ನು ನೋಡಿ ಸಂತಸಪಟ್ಟರು. ಸುಮಾರು – 5000 ಸಾವಿರ ಪ್ರೇಕ್ಷಕರು ಕಾರ್ಯಕ್ರಮಕ್ಕೆ ಸಾಕ್ಷೀಭೂತರಾದರು.

ಶಾಲಾ ಅಧ್ಯಕ್ಷರಾದ ಎ ಸುಬ್ರಮಣ್ಯ, ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷರಾದ ಸ್ವರೂಪ್, ಟ್ರಸ್ಟಿಗಳಾದ ಶ್ರೀಮತಿ ನಯನ ಸ್ವರೂಪ್, ಡಾ|| ಮೃದುಲಾ, ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!