Bashettihalli elections and prohibitory orders imposed until December 24

ಗುಡ್ಮಾರ್ನಿಂಗ್ ನ್ಯೂಸ್: ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ.. ಡಿ. 24 ರವರೆಗೆ ನಿಷೇಧಾಜ್ಞೆ ಜಾರಿ

ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆ ಸಂಬಂಧ ಡಿಸೆಂಬರ್ 24 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ ಎಣಿಕೆ ನಡೆಯಲಿದೆ.

ಈ ಕಾರ್ಯವು ಸುಗಮವಾಗಿ, ಶಾಂತಿಯುತವಾಗಿ ನಡೆಯುವ ಸದುದ್ದೇಶದಿಂದ ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರ ಸಂಜೆ 05.00 ಗಂಟೆಯಿಂದ ಡಿ.24 ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿ ಇರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ.

ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಫೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ.

ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳನ್ನು ಮತ್ತು ಶವ ಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆಸುವುದು.

ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಎಣಿಕೆ ಕಾರ್ಯ ಆದ ನಂತರ ಪಟಾಕಿ ಹೊಡೆಯುವುದು ನಿಷೇಧಿಸಿದೆ ಮತ್ತು ಚುನಾವಣಾ ಅಭ್ಯರ್ಥಿಗಳ ವಿಜಯೋತ್ಸವವನ್ನು ಆಚರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!