District administration all set for Ghati Subramanya Brahmarathotsava: DC

ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಬೆಂ.ಗ್ರಾ.ಜಿಲ್ಲೆ; ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ (Ghati Subramanya) ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ (Brahmarathotsava) ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾಹಿತಿ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಡಿಸೆಂಬರ್ 25 ರಂದು ಮಧ್ಯಾಹ್ನ 12.00 ರಿಂದ 12.15 ಗಂಟೆಯ ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಕಳೆದ ವರ್ಷ 1.50 ಲಕ್ಷದವರೆಗೂ ಭಕ್ತಾದಿಗಳು ಭಾಗಿಯಾಗಿದ್ದರು.

ಈ ಬಾರಿ ಬ್ರಹ್ಮರಥೋತ್ಸವವು ರಜೆ ದಿನ ಬಂದಿರುವುದರಿಂದ ಸುಮಾರು ಎರಡು ಲಕ್ಷ ಭಕ್ತಾದಿಗಳು ಬರುವ ಸಾಧ್ಯತೆ ಇದೆ. ಟ್ರಾಫಿಕ್ ಸಮಸ್ಯೆ, ಜನಸಂದಣಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದರು.

ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಿದ್ದು ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿದೆ. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ದೇವಾಲಯ ಸುತ್ತಮುತ್ತಲಿನ ಫುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ ಎಂದರು.

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ರಥೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು.

ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾದಿಗಳು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಬಹುದು.

ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದ್ದು ಭಕ್ತಾದಿಗಳು ಸಹಕರಿಸಬೇಕು ಎಂದರು.

2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ.

ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ, ಪ್ರತಿ ವರ್ಷದಂತೆ ಬ್ರಹ್ಮರಥೋತ್ಸವದಲ್ಲಿ ಎರಡು ಲಕ್ಷದವರೆಗೂ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಭಕ್ತರಿಗೆ ಪಾರ್ಕಿಂಗ್ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಲಾಗಿದೆ‌.

ಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಈ ವರ್ಷ 1000 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿದೆ.

ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ಬ್ರಹ್ಮರಥೋತ್ಸವದ ಹಿನ್ನಲೆ ಘಾಟಿಯ ರಂಗ ಮಂದಿರದಲ್ಲಿ ಡಿಸೆಂಬರ್ 24, 25 ರಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಒಟ್ಟು 70 ಕಲಾ ತಂಡಗಳು ನೋಂದಣಿ ಆಗಿದ್ದು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಲೂ ಅವಕಾಶವಿದ್ದು ರಂಗ ಮಂದಿರ ಬಳಿ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಆಗಿ ನೋಂದಾಯಿಸಬಹುದಾಗಿದೆ ಎಂದರು.

ಕಂಟನಕುಂಟೆ , ಹಾಡೋನಹಳ್ಳಿ ಗ್ರಾಪಂ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಬದಿಯ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಫುಟ್ ಪಾತ್ ಸ್ವಚ್ಚತೆ, ಅಂಗಡಿಗಳ ತೆರವು ಮಾಡಲಾಗಿದೆ.

ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ತುರ್ತು ಸೇವೆಗಳ ನಿಮಿತ್ತ 04 ಅಂಬುಲೆನ್ಸ್ ವ್ಯವಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ, ಹೆಚ್ಚುವರಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ, ಪಾರ್ಕಿಂಗ್ ಸ್ಲಾಟ್ ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರು, ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯೀದಾ ಆಯಿಷಾ, ಘಾಟಿ ಸುಬ್ರಮಣ್ಯ ದೇವಾಲಯದ ಕಾರ್ಯದರ್ಶಿ ದಿನೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು (Ganja) ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ಯಲ್ಲಿ

[ccc_my_favorite_select_button post_id="120501"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!