A grand Brahma Rathotsava in Ghati Subrahmanya Kshetra

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ: ಸಾವಿರಾರು ಮಂದಿ ಭಾಗಿ

ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲಿ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಘಾಟಿ ಸುಬ್ರಹ್ಮಣ್ಯ (Ghati Subrahmanya) ಪುಣ್ಯಕ್ಷೇತ್ರದಲ್ಲಿ ಗುರುವಾರವಾದ ಇಂದು ಸ್ವಾಮಿಯ ಬ್ರಹ್ಮರಥೋತ್ಸವ ಅತ್ಯಂತ ವೈಭವದಿಂದ ನಡೆಯಿತು.

ಸಾವಿರಾರು ಜನ ಭಕ್ತಾಧಿಗಳು ರಾಜ್ಯದ ಹಲವು ಪ್ರದೇಶಗಳಿಂದಲೇ ಅಲ್ಲದೇ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ರಥೋತ್ಸವಕ್ಕೆ ಆಗಮಿಸಿದ್ದರು.

ಗುರುವಾರ ಮಧ್ಯಾಹ್ನ 12-10 ಗಂಟೆಗೆ ಸ್ವಾಮಿಯನ್ನು ಪ್ರತಿಷ್ಠಿಸಲಾಗಿದ್ದ ತೇರನ್ನು ಅರ್ಚಕರ ವೇದಘೋಷಗಳ ನಡುವೆ ಭಕ್ತಾಧಿಗಳು ಎಳೆದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಸಚಿವರಾದ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಅನುರಾಧ, ಎಸ್ಪಿ ಸಿಕೆ ಬಾಬಾ, ಎಸಿ ದುರ್ಗ ಶ್ರೀ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಶಾಸಕ ಧೀರಜ್ ಮುನಿರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಶ್ರೀ ಸುಬ್ರಹ್ಮಣ್ಯಸ್ವಾಮಿಯ ದರ್ಶನ ಪಡೆಯಲು ಬೆಳಗಿನಿಂದಲೇ ಭಕ್ತಾಧಿಗಳು ಸಾಲುಗಟ್ಟಿ ನಿಂತಿದ್ದರು. ಕ್ಷೇತ್ರದಲ್ಲಿರುವ ನಾಗರಕಲ್ಲುಗಳಿಗೆ ಭಕ್ತ ಸಮೂಹ ಹಾಲೆರೆದು ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ: ಸಾವಿರಾರು ಮಂದಿ ಭಾಗಿ

ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಸವಿತಾ ಯುವ ಜನ ವೇದಿಕೆ, ಆಂಧ್ರ ದೇವಾಂಗ ಸಂಘ, ನಗರ್ತರ ಸಂಘ ಸೇರಿದಂತೆ ವಿವಿಧ ಭಕ್ತ ಮಂಡಲಿಗಳಿಂದ ಅರವಂಟಿಗೆ ಹಾಗೂ ಅನ್ನ ಸಂತರ್ಪಣೆಗಳನ್ನು ಏರ್ಪಡಿಸಲಾಗಿತ್ತು.

ರಜೆ ಸಾವಿರಾರು ಮಂದಿ ಭಾಗಿ

ಷಷ್ಠಿ ಹಾಗೂ ಕ್ರಿಸ್ಮಸ್ ರಜೆಯ ಕಾರಣ ರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದು, ಮುಖ್ಯ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ರಥೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು.

ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾದಿಗಳು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಬಹುದಾಗಿದೆ.

ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ.

ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿತ್ತು.

ಪ್ರತಿ ವರ್ಷದಂತೆ ಬ್ರಹ್ಮರಥೋತ್ಸವದಲ್ಲಿ ಎರಡು ಲಕ್ಷದವರೆಗೂ ಸಾರ್ವಜನಿಕರು ಸೇರುವ ನಿರೀಕ್ಷೆ ಹೊಂದಲಾಗಿದೆ. ಭಕ್ತರಿಗೆ ಪಾರ್ಕಿಂಗ್ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಲಾಗಿತ್ತು.

ಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿ. ಭದ್ರತೆಗಾಗಿ ಈ ವರ್ಷ 1000 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿತ್ತು.

ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿದೆ.

600 ವರ್ಷಗಳ ಇತಿಹಾಸ

ಸುಮಾರು 600 ವರ್ಷಗಳ ಇತಿಹಾಸವಿರುವ ಘಾಟಿ ಪುಣ್ಯಕ್ಷೇತ್ರದಲ್ಲಿ ಶ್ರೀ ಸುಬ್ಯಮಣ್ಯ ಸ್ವಾಮಿ ಸರ್ಪ ರೂಪದಲ್ಲಿ ನೆಲೆಸಿದ್ದಾರೆ.

ದೇವಾಲಯದ ಗರ್ಭಗುಡಿಯಲ್ಲಿರುವ ಏಕಶಿಲೆ ವಿಗ್ರಹದಲ್ಲಿ ಮುಂಭಾಗದಲ್ಲಿ ಸುಬ್ರಮಣ್ಯ,ಹಿಂಭಾಗದಲ್ಲಿ ನರಸಿಂಹಸ್ವಾಮಿ ನೆಲೆಸಿರುವುದು ಘಾಟಿಕ್ಷೇತ್ರದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣುವುದಿಲ್ಲ.

ಸರ್ಪ ದೋಷ ಮತ್ತು ಕುಜದೋಷಗಳಿರುವವರು ಇಲ್ಲಿ ನಾಗರಕಲ್ಲನ್ನು ಪ್ರತಿಷ್ಠಿಸಿ ಪೂಜಿಸಿದರೆ ದೋಷನಿವಾರಣೆಯಾಗುತ್ತದೆಂಬುದು ಅದೇರೀತಿ ಇಲ್ಲಿನ ದೇವಾಲಯದ ಹಿಂಭಾಗದಲ್ಲಿರುವ ಕಲ್ಯಾಣಿಗಳಲ್ಲಿ ಸ್ನಾನ ಮಾಡಿದರೆ ಸರ್ವ ರೋಗಗಳು ವಾಸಿಯಾಗುತ್ತವೆ ಎಂದು ಭಕ್ತಾಧಿಗಳ ವಿಶ್ವಾಸ.

ಘಾಟಿ ಕ್ಷೇತ್ರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರತಿನಿತ್ಯವೂ ಎಲ್ಲೆಂದರಲ್ಲಿ ಸರ್ಪಗಳು ಕಾಣಿಸುತ್ತಿರುತ್ತವೆಂದು. ಆದರೆ ಸರ್ಪಗಳಿಗೆ ಗ್ರಾಮಸ್ತರಾಗಲಿ,ಗ್ರಾಮಸ್ತರಿಗೆ ಸರ್ಪಗಳಾಗಲೀ ಯಾವುದೇ ಹಾನಿ ಮಾಡುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!