
ದೊಡ್ಡಬಳ್ಳಾಪುರ: ತಾಲೂಕಿನ ಹಿರಿಯ ರಾಜಕಾರಣಿ, ಜೆಡಿಎಸ್ ಹಿರಿಯ ಮುಖಂಡರಾದ ಕುರುವಿಗೆರೆ ಎ.ನರಸಿಂಹಯ್ಯ ಅವರ ಸಹೋದರ ಎ. ಕೃಷ್ಣಪ್ಪ (Kuruvigere A. Krishnappa) ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಮೃತರು ಮಡದಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಕುರುವಿಗೆರೆ ಗ್ರಾಮದ ಸ್ವಂತ ಜಮೀನಿನಲ್ಲಿ ಇಂದು (ಡಿ.27) ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ ಎಂದು ತೆಂಗು ನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು ಅವರು ತಿಳಿಸಿದ್ದಾರೆ.