ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Pea Sogadu should become an attraction in the international market: DCM D.K. Shivakumar

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ಸಂತೆಯಲ್ಲಿ ಮಿಲ್ಕಿ ಮಶ್ರೂಮ್, ಬೇಲದ ಹಣ್ಣು, ತುಪ್ಪ, ಅವರೇಕಾಯಿ ತಿನಿಸು, ಅವರೆಕಾಯಿ ಬಿಡಿಸುವ ಯಂತ್ರ, ನಾಟಿ ಬೆಲ್ಲ, ಸೀಬೆ ಹಣ್ಣುಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಮನಸೋತರು.

ರೈತ ಸಂತೆ ಕಾರ್ಯಕ್ರಮದಲ್ಲಿ ರೈತರ ಉತ್ಪನ್ನಗಳ ಮಾರಾಟ ಮಳಿಗೆಗಳಿಗೆ ಖುದ್ದಾಗಿ ಭೇಟಿ ನೀಡಿದ ಶಿವಕುಮಾರ್ ಅವರು ರೈತರೊಂದಿಗೆ ಮಾತುಕತೆ ನಡೆಸಿದರು. ಅವರ ಉತ್ಪನ್ನಗಳ ಮಾಹಿತಿ ಪಡೆದರು. ನಾಟಿ ಬೆಲ್ಲ ಸೇರಿದಂತೆ ಕೆಲವು ತಿನಿಸುಗಳನ್ನು ಸವಿದರು. ಖರೀದಿ ಮಾಡಿದರು.

ರೈತರೊಬ್ಬರು ಬೇಲ್ದಣ್ಣಿನ ಜ್ಯೂಸ್ ಮಾಡಿ ತಂದು ಕೊಟ್ಟಾಗ, ಸಂತೋಷಗೊಂಡ ಶಿವಕುಮಾರ್ ಅವರು, “ಬೇಲ್ದಣ್ಣು ಎಂದರೆ ನನಗೆ ಪಂಚಪ್ರಾಣ. ಬೇಲದ ಹಣ್ಣುಗಳನ್ನು ನಮ್ಮ ಮನೆಗೂ ಕಳುಹಿಸಿಕೊಡಿ, ಮನೆಯಲ್ಲಿ ಎಲ್ಲರೂ ಸವಿಯುತ್ತೇವೆ” ಎಂದು ಹೇಳಿದರು.

ಇನ್ನು ಕೃಷಿ ವಿವಿ ಅವರು ಕಂಡು ಹಿಡಿದಿರುವ ಅವರೆಕಾಯಿ ಬಿಡಿಸುವ ಯಂತ್ರವನ್ನು ಪರಿಶೀಲಿಸಿದ ಶಿವಕುಮಾರ್ ಅವರು ಅಲ್ಲೇ ನಿಂತು ಅವರೆಕಾಯಿ ಬಿಡಿಸುವ ಯಂತ್ರದ ಚಮತ್ಕಾರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ನಾಗಮಂಗಲ ತಾಲ್ಲೂಕಿನ ರೈತರು ಸೇರಿ ಸಾವಯವ ಪದ್ಧತಿ ಮೂಲಕ ಬೆಳೆದ ವಿವಿಧ ರೀತಿಯ ಅಣಬೆಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವುದನ್ನು ಪರಿಶೀಲಿಸಿದರು. ಮಿಲ್ಕಿ ಮಶ್ರೂಮ್, ಬಟನ್ ಮಶ್ರೂಮ್ ಹಾಗೂ ಆಯಿಸ್ಟರ್ ಮಶ್ರೂಮ್ ಗಳನ್ನು ಖರೀದಿ ಮಾಡಿದರು.

ಮತ್ತೊಬ್ಬರು ತಂದು ಕೊಟ್ಟ ನಾಟಿ ಹಸುವಿನ ತುಪ್ಪವನ್ನು ಬಹಳ ಸಂತೋಷದಿಂದ ಸ್ವೀಕರಿಸಿದರು. ಬೇಕಾದಾಗ ತರಿಸಿಕೊಳ್ಳುವುದಾಗಿ ಹೇಳಿ ಅವರ ಫೋನ್ ನಂಬರ್ ಕೂಡ ಪಡೆದರು.

“ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾಸವಿ ಸಂಸ್ಥೆಯವರು ಆಯೋಜಿಸಿರುವ ಅವರೆಬೇಳೆ ಮೇಳ ಕಾರ್ಯಕ್ರಮದಲ್ಲಿ ಹಾಗೂ ಅದಕ್ಕೆ ಮೊದಲು ಮಾಧ್ಯಮದವರ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ರೈತ ಸಂತೆಗೆ ಹೋಗಿ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಅಲ್ಲಿ ರೈತರು ತಮ್ಮ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ಅದನ್ನು ನೋಡಿ ಬಹಳ ಸಂತೋಷವಾಯಿತು. ವಾಸವಿ ಸಂಸ್ಥೆಯವರು ಬಸವನಗುಡಿಯಲ್ಲಿ ಅವರೆಕಾಳು ಮೇಳವನ್ನು ಆಯೋಜಿಸಿ ಅವರೇ ಕಾಳಿನಿಂದ ನೂರಾರು ಪದಾರ್ಥ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.

ಹಣ್ಣುಗಳ ರಾಜ ಮಾವು, ಕಾಳುಗಳ ರಾಜ ಅವರೆಕಾಯಿ. ಮಾಗಡಿ ಅವರೆಕಾಯಿ ತನ್ನ ಸೊಗಡಿಗೆ ಬಹಳ ಪ್ರಸಿದ್ಧಿ. ನಾನು ಜಿಕೆವಿಕೆಯಲ್ಲಿ ನೋಡಿದೆ. ಅಲ್ಲಿ ಅವರೆಕಾಯಿ ಬಿಡಿಸುವ ಯಂತ್ರವನ್ನು ಕೃಷಿ ವಿವಿಯವರು ಕಂಡು ಹಿಡಿದಿದ್ದಾರೆ ಎಂದು ತಿಳಿಸಿದರು.

ಈ ಮೇಳದಲ್ಲಿ 5-6 ಲಕ್ಷ ಜನ ಭಾಗವಹಿಸುತ್ತಾರೆ. ಐಸ್ ಕ್ರೀಮ್ ನಿಂದ ಹಿಡಿದು ದೋಸೆ, ಚಿತ್ರಾನ್ನಾ, ಹೀಗೆ ಬಗೆಬಗೆಯ ಪದಾರ್ಥ ಮಾಡುತ್ತಿದ್ದಾರೆ. ನಾನು ಇಲ್ಲಿ ಪಾನಿಪುರಿ ರುಚಿ ಸವಿದೆ. ಕಳೆದ ವರ್ಷ ಬಂದಾಗ ದೋಸೆ ಸವಿದಿದ್ದೆ. ನನಗೂ ಅವರೆಕಾಳು ಎಂದರೆ ಬಹಳ ಇಷ್ಟ. ನನಗೆ ಅವರೆಕಾಳು ಬಹಳ ಇಷ್ಟವೆಂದು ನನ್ನ ಸ್ನೇಹಿತ ಸಿಹಿಕಹಿ ಚಂದ್ರು ಕಾರ್ಯಕ್ರಮವೊಂದರಲ್ಲಿ ಅವರೆಕಾಳು ಉಪ್ಪಿಟ್ಟು ಮಾಡಿಕೊಟ್ಟಿದ್ದ.

ಬೆಂಗಳೂರಿನ ನಾಗರೀಕರಿಗೆ, ರೈತರಿಗೆ ಅನುಕೂಲವಾಗಬೇಕು. ಉದ್ಯೋಗ ಸೃಷ್ಟಿಯಾಗಬೇಕು ನಮ್ಮ ಸಂಸ್ಕೃತಿ ಇತಿಹಾಸ, ನಮ್ಮ ರೈತರ ಬೆಳೆಗೆ ಉತ್ತಮ ಬೆಳೆ ಸಿಗಬೇಕು. ಬೆಂಗಳೂರಿನ ಸುತ್ತಮುತ್ತಲ ಭಾಗದಲ್ಲಿ ಮಾತ್ರ ಇದನ್ನು ಬೆಳೆಯಲಾಗುತ್ತದೆ. ಹೀಗಾಗಿ ಇದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು.

ಕರ್ನಾಟಕದ ಈ ಖಾದ್ಯಗಳು, ರುಚಿ ಎಲ್ಲರಿಗೂ ತಲುಪುವಂತಾಗಬೇಕು. ರಾಜ್ಯದ ರೈತರಿಗೆ ಒಳ್ಳೆಯದಾಗಬೇಕು. ವಾಸವಿ ಸಂಸ್ಥೆಯವರು 26 ವರ್ಷಗಳಿಂದ ಈ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದಾರೆ. ನಾಗರೀಕರು ಬಂದು ಇಲ್ಲಿನ ರುಚಿ ಸವಿಯಲಿ. 2026ರ ಹೊಸ ವರ್ಷ ನಿಮ್ಮ ಬದುಕಿನಲ್ಲಿ ಹೆಚ್ಚಿನ ಶಕ್ತಿ ತುಂಬಲಿ ಎಂದು ಶುಭ ಹಾರೈಸಿದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]