ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ (Vaikunta Ekadashi) ಹಿಂದೂ ಧರ್ಮದ ಪವಿತ್ರ ದಿನಗಳಲ್ಲಿ ಒಂದು, ಇದು ಶ್ರೀ ವಿಷ್ಣುವಿಗೆ ಸಮರ್ಪಿತವಾಗಿದೆ. ಈ ದಿನವು ವೈಕುಂಠ ದ್ವಾರದಲ್ಲಿ ಸಾಗಿ ದೇವರ ದರ್ಶನ ಪಡೆಯುವುದರಿಂದ ವಿಶೇಷವಾಗಿದೆ.
ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ, ವೈಕುಂಠ ದ್ವಾರ ತೆರೆಯಲಾಗಿದೆ.
ವಡ್ಡರಹಳ್ಳಿಯ ಶ್ರೀ ತಿರುಮಲ ಕಲ್ಯಾಣ ಶ್ರೀನಿವಾಸ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಸ್ವಾಮಿಯವರಿಗೆ ಆರತಿಗಳಿವೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲ್ ಪಾಲ್ ದಿನ್ನೆ ಬಳಿಯ ಶ್ರೀ ವಿಶ್ವ ಕಲ್ಯಾಣ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ವೈಕುಂಠ ಉತ್ತರ ಧ್ವಾರ ತೆರೆಯಲಾಗಿದೆ.
ಗಾಂಧಿನಗರದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ 6 ಗಂಟೆಗೆ ಪ್ರಾಕಾರೋತ್ಸವ, 10.30ಕ್ಕೆ ವಿಷ್ಣು ಸಹಸ್ರನಾಮ, ಸಂಜೆ 4 ಗಂಟೆಗೆ ಶಾರದಾ ಸಂಗೀತ ಶಾಲೆ ಗಾಯಕರಿಂದ ಹಾಡುಗಾರಿಕೆ ನಂತರ ಹರಿನಾಮ ಸ್ವರಣೆ ಕಾರ್ಯಕ್ರಮಗಳಿವೆ.
ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ, ಕೊಂಗಾಡಿಯಪ್ಪ ಮುಖ್ಯ ರಸ್ತೆಯ ಶ್ರೀ ವೈಕುಂಠ ಜನಾರ್ಧನ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಲಿದೆ.
ಹೆಗ್ಗಡಿಹಳ್ಳಿ ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.