ದೊಡ್ಡಬಳ್ಳಾಪುರ: ತಾಲೂಕಿನ ಮೆಳೇಕೋಟೆ ಕ್ರಾಸ್‌ನ ಶ್ರೀ ಜಗದ್ಗುರು ಚಂದ್ರಶೇಖರನಾಥ ಸ್ವಾಮಿಜಿ ಗ್ರಾಮಾಂತರ ಶಾಲೆಯ (SJCR School) ಜ್ಞಾನ ಸಿಂಧು ಕ್ಯಾಂಪಸ್‌ನಲ್ಲಿ ಮಾತೃಭೋಜನ ಹಾಗೂ ಶಾಲಾ ವಾರ್ಷಿಕೋತ್ಸವ (Anniversary) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಮಂಗಳನಾಥ ಸ್ವಾಮೀಜಿಯವರು ವಹಿಸಿದ್ದರು.
ಶಾಲೆಯ ವಿದ್ಯಾರ್ಥಿಗಳ ತಾಯಂದಿರು ಮನೆಯಿಂದ ಮಾಡಿ ತಂದಿದ್ದ ವಿವಿಧ ಆಹಾರವನ್ನು ವಿದ್ಯಾರ್ಥಿಗಳಿಗೆ ತಿನಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಆ ನಂತರ ಎಲ್ಲಾ ತಾಯಂದಿರು ತಂದಿದ್ದ ಆಹಾರವನ್ನು ವಿದ್ಯಾರ್ಥಿಗಳಿಗೆ ಬಡಿಸಿದರು.
ಸ್ವಾಮೀಜಿಯವರು ಮಾತನಾಡಿ, SJCR ಶಾಲೆಯು ಹಲವಾರು ವರ್ಷಗಳಿದ ಉತ್ತಮ ಶಿಕ್ಷಣ ಹಾಗೂ SSLC ಯಲ್ಲಿ ಉತ್ತಮ ಫಲಿತಾಂಶ ನೀಡುತ್ತಾ ಬಂದಿದ್ದು, ನಗರ ಪ್ರದೇಶದಿಂದ ದೂರ ಇದ್ದರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ಚಿಕ್ಕಬಳ್ಳಾಪುರ ವಿಭಾಗದ ಮುಖ್ಯ ಆಡಳಿತಾಧಿಕಾರಿಗಳಾದ ಡಾ.N.ಶಿವರಾಮರೆಡ್ಡಿ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ ನೀವು ಕಲಿಸಿದ ಪ್ರಾರಂಭದ ಶಿಸ್ತಿನಿಂದ ಶಾಲೆಯಲ್ಲಿ ವಿದ್ಯಾರ್ಥಿಗಳು ಇನ್ನು ಹೆಚ್ಚು ಕಲಿಯಲು ಸಾಧ್ಯವಾಗುತ್ತದೆ.
ಕಲಿಕೆಗೆ ಮನೆ, ಶಾಲೆ ಹಾಗೂ ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದ್ದು ಪೋಷಕರು ಮನೆಯಲ್ಲಿ ಕಲಿಕೆಗೆ ಪ್ರೋತ್ಸಾಹ ನೀಡಿದರೆ ಶಾಲೆಯಲ್ಲಿ ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, SICR ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಡಾ.ಲಿಖಿತ್ (MD Anasthesia), ಪ್ರಜ್ವಲ್ (Fir Department). ಕರ್ನಾಟಕ ತೆಂಗು ನಾರಿನ ಮಂಡಳಿಯ ಅಧ್ಯಕ್ಷರಾದ ವೆಂಕಟೇಶ್ ಬಾಬು, ಹೆಗ್ಗಡಿಹಳ್ಳಿ ಪಂಚಾಯತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕ H.L.ವಿಜಯಕುಮಾರ್ ಮತ್ತಿತರರಿದ್ದರು.
ವಿದ್ಯಾರ್ಥಿಗಳು ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಹಾಡುಗಳಿಗೆ ನೃತ್ಯ ಮಾಡಿ ಪೋಷಕರನ್ನು ರಂಜಿಸಿದರು.