ದೊಡ್ಡಬಳ್ಳಾಪುರ: ಮನೆಯ ಕೊಣೆಯಲ್ಲಿ ನೇಣು ಬಿಗಿದುಕೊಂಡು 26 ವರ್ಷದ ಯುವಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ತಾಂಭಿಕಾ ಬಡಾವಣೆಯಲ್ಲಿ ವರದಿಯಾಗಿದೆ.
ಮೃತ ಯುವಕನನ್ನು 26 ವರ್ಷದ ವಿನಯ್ ರಾಜ್ ಬಿ ಎಂದು ಗುರುತಿಸಲಾಗಿದೆ.
ಮೃತನ ತಾಯಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಮನೆಯ ಕೊಣೆಯಲ್ಲಿ ವಿನಯ್ ರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.