ಅಕ್ಕ ಕೆಫೆ: ಸಂಜೀವಿನಿ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

Applications invited

ಬೆಂ.ಗ್ರಾ‌.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಅಕ್ಕ ಕೆಫೆ (Akka Cafe) ನಿರ್ವಹಣೆ ಮಾಡಲು ಜಿಲ್ಲೆಯ ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).

ಅರ್ಜಿ ನಮೂನೆಗಳು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಗಳ ಸಂಜೀವಿನಿ ಶಾಖೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಸಂಜೀವಿನಿ ಒಕ್ಕೂಟಗಳಲ್ಲಿ ಲಭ್ಯವಿದ್ದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕಕ್ಕೆ ದಿನಾಂಕ 08.01.2026 ರ ಸಂಜೆ:5.30 ರೊಳಗೆ ಸಲ್ಲಿಸಬೇಕು.

ದಿನಾಂಕ ಮುಗಿದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಜೀವಿನಿ ಜಿಲ್ಲಾ, ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕಗಳನ್ನು ಸಂಪರ್ಕಿಸಿ ಎಂದು ಜಿಪಂ ಸಿಇಒ ಡಾ.ಕೆ ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಕ ಕೆಫೆ ನಿರ್ವಹಿಸಲು ಮಹಿಳಾ ಸ್ವಸಹಾಯ ಗುಂಪುಗಳ ಆಯ್ಕೆ ಮಾನದಂಡಗಳು ನಿಗದಿ ಪಡಿಸಿದ್ದು ಅಕ್ಕ ಕಥೆಯಲ್ಲಿ ತೊಡಗಿಸಿಕೊಳ್ಳುವವರು ಕಡ್ಡಾಯವಾಗಿ ಜಿಲ್ಲೆಯ ಎನ್.ಆರ್.ಎಲ್.ಎಂ ಸ್ವಸಹಾಯ ಗುಂಪಿನವರಾಗಿರಬೇಕು.

ವಾಕ್ ಪರಿಣಿತಿಯಲ್ಲಿ ಆಸಕ್ತಿವುಳ್ಳವರಿಗೆ ಮೊದಲ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು/ಪ್ರದೇಶ ಮಟ್ಟದ ಒಕ್ಕೂಟಗಳಡಿ ಅರ್ಹ ಮತ್ತು ಬಂಡವಾಳವನ್ನು ಹೂಡುವ ಸ್ವಸಹಾಯ ಗುಂಪುಗಳಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.

ಯಾವುದೇ ಒಕ್ಕೂಟ/ಹಣಕಾಸು ಸಂಸ್ಥೆಯ ಸಾಲ ಬಾಕಿದಾರರಾಗಿರಬಾರದು. ಅಕ್ಕ ಕೆಫೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸುವ ಆದೇಶ ಸುತ್ತೋಲೆಗಳನ್ನು ಪಾಲನೆ ಮಾಡಲು ಬದ್ಧರಾಗಿರಬೇಕು.

ರಾಜ್ಯ/ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತರಬೇತಿ ಮತ್ತು ಕಾರ್ಯಾಗಾರಗಳಲ್ಲಿ ಭಾಗವಹಿಸಲು ಸಿದ್ಧರಿರಬೇಕು. ಅಕ್ಕ ಕೆಫೆಯಲ್ಲಿ ತೊಡಗಿಸಿಕೊಳ್ಳುವ ಸ್ವಸಹಾಯ ಗುಂಪಿನಲ್ಲಿ ಕನಿಷ್ಠ 5 ರಿಂದ ಗರಿಷ್ಠ 10 ಮಹಿಳೆಯರಿರುವ ಸ್ವಸಹಾಯ ಗುಂಪನ್ನು ಆಯ್ಕೆ ಮಾಡಲಾಗುವುದು.

ಅಕ್ಕ ಕೆಫೆ ಶ್ರೇಣಿಕರಣ ಪ್ರಕ್ರಿಯೆಗೆ ಬದ್ಧರಾಗಿರಬೇಕು.

ಅರ್ಜಿಯೊಂದಿಗೆ ಸ್ವಸಹಾಯ ಗುಂಪು ಮತ್ತು ಸದಸ್ಯರು ಎನ್.ಆರ್.ಎಲ್.ಎಂ ನ ಎಂಐಎಸ್‌ನಲ್ಲಿ ದಾಖಲಾಗಿರುವ ಬಗ್ಗೆ ಎಂಐಎಸ್ ಕೋಡ್ ಮಾಹಿತಿ. ಪಾಕ ಪರಿಣಿತಿಯಲ್ಲಿ ತರಬೇತಿ ಪಡೆದ ಪ್ರಮಾಣ ಪತ್ರ. ದುಡಿಯುವ ಬಂಡವಾಳವನ್ನು ಸದಸ್ಯರು ಹೂಡುವ ಬಗ್ಗೆ, ದೃಢೀಕರಣ ಪತ್ರ. ಒಕ್ಕೂಟ/ಹಣಕಾಸು ಸಂಸ್ಥೆಯ ಸಾಲ ಬಾಕಿದಾರರಾಗಿರದ ಬಗ್ಗೆ ದೃಢೀಕರಣ. ಅಕ್ಕ ಕೆಫೆಯ ನಿರ್ವಹಣೆಯನ್ನು ಗುಂಪಾಗಿ 5 ರಿಂದ 10 ಜನ ಮಹಿಳೆಯರು ನಿರ್ವಹಿಸುವ ಬಗ್ಗೆ ದೃಢೀಕರಣ.

ರಾಜ್ಯ/ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತರಬೇತಿ ಮತ್ತು ಕಾರ್ಯಾಗಾರಗಳಲ್ಲಿ ಭಾಗವಹಿಸಲು ಸಿದ್ಧರಿರುವ ಬಗ್ಗೆ ದೃಢೀಕರಣ. ಅಕ್ಕ ಕೆಫೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸುವ ಆದೇಶ ಸುತ್ತೋಲೆಗಳನ್ನು ಪಾಲನೆ ಮಾಡಲು ಬದ್ಧರಾಗಿರುವ ಬಗ್ಗೆ ದೃಢೀಕರಣ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]