Modi government has taken away power from villages: Cmsiddaramaiah

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ (Modi) ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಆಕ್ರೋಶ ವ್ಯಕ್ತಪಡಿಸಿದರು.‌

ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದರು.

ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು.

ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21 ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ.

ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ ಎಂದು ವಿವರಿಸಿದರು.

ಮನಮೋಹನ್ ಸಿಂಗ್ ಅವರ ಜನಪರ ಕಾಯ್ದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ.‌

ನರೇಗಾ ಕಾಯ್ದೆ ಪ್ರಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರು, ಕೃಷಿ ಕಾರ್ಯಗಳ ಜೊತೆಯಲ್ಲಿ ತಾವಿದ್ದ ಸ್ಥಳದಲ್ಲೇ ನರೇಗಾ ಅಡಿ ಕೂಲಿ ಕೆಲಸ ಮಾಡಲು ಅವಕಾಶವಿತ್ತು. ಆ ಮೂಲಕ ಹಳ್ಳಿಗಾಡಿನ ಆರ್ಥಿಕತೆ ಕಟ್ಟಲು ಸಾಧ್ಯವಾಗಿತ್ತು. ಸ್ಥಳೀಯವಾಗಿ ಆಸ್ತಿ ಸೃಜನೆಯಾಗುತ್ತಿತ್ತು. ಉದ್ಯೋಗ ಕೇಳಿ ಪಡೆಯುವ ಹಕ್ಕು ಜನರಿಗಿತ್ತು. ಈಗ ಇದ್ಯಾವುದೂ ಇಲ್ಲವಾಗಿದೆ ಎಂದರು.‌

ಕಳೆದ 11 ವರ್ಷಗಳ ಕೇಂದ್ರ ಸರ್ಕಾರದ ಸಾಧನೆ ಅಂದರೆ ಯೋಜನೆಗಳ ಹೆಸರು ಬದಲಾಯಿಸಿರುವುದು ಮಾತ್ರ. ಹಿಂದೆ ಜಾರಿಯಲ್ಲಿದ್ದ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಅಥವಾ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವನ್ನು ಮೋದಿ ಸರ್ಕಾರ ಮಾಡಿದೆ.

ಪ್ರಸ್ತುತ ಕಾಯ್ದೆಯಡಿ 100 ದಿನ ಕನಿಷ್ಟ ಕೆಲಸ ನೀಡಬೇಕಾಗಿತ್ತು. ಅವರು ಎಲ್ಲಿ ವಾಸಿಸುತ್ತಾರೋ ಅಲ್ಲಿಯೇ ಕೆಲಸ ನೀಡಬೇಕಾಗಿತ್ತು. ಈಗ ಹೊಸ ಕಾಯ್ದೆ ಸೆಕ್ಷನ್ 5(1) ಪ್ರಕಾರ ಸರ್ಕಾರ ಅಧಿಸೂಚಿತ ಪ್ರದೇಶದಲ್ಲಿ ಮಾತ್ರ ಉದ್ಯೋಗ ನೀಡಲಾಗುತ್ತದೆ. ಉದ್ಯೋಗ ದೊರೆಯುವ ಬಗ್ಗೆ ಯಾವುದೇ ಗ್ರಾಮ ಪಂಚಾಯತ್ ಗಳಿಗೂ ಖಾತ್ರಿಯಿರುವುದಿಲ್ಲ‌ ಎಂದರು.

ವರ್ಷದ ಯಾವುದೇ ಅವಧಿಯಲ್ಲಿ ಲಭ್ಯವಾಗುತ್ತಿದ್ದ ಕೂಲಿ ಕೆಲಸವನ್ನು ಈಗ ನಿರ್ಬಂಧಿಸಲಾಗಿದ್ದು, ಕೃಷಿ ಚಟುವಟಿಕೆ ಅವಧಿಯ 60 ದಿನ ಯೋಜನೆಯಡಿ ಯಾವುದೇ ಉದ್ಯೋಗ ನೀಡಲಾಗುವುದಿಲ್ಲ.

ಹಣದುಬ್ಬರಕ್ಕೆ ತಕ್ಕಂತೆ ಕೂಲಿ ಹಣವನ್ನು ಸರಿದೂಗಿಸುವ ಅವಕಾಶವನ್ನು ತೆಗೆದು ಹಾಕಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ.

ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ.

ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಿದೆ‌ ಎಂದರು.

ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ ಎಂದರು.

ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ.

ಪಂಚಾಯತ್ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ಚಲುವರಾಯ ಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.

ಮನುಸ್ಮೃತಿ ಪ್ರಕಾರ ಮಹಿಳೆಯರು, ದಲಿತರು ಮತ್ತು ಶೂದ್ರರ ಕೈಯಲ್ಲಿ ಹಣ ಇರಬಾರದು

20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ.

ಮನುಸ್ಮೃತಿ ಪ್ರಕಾರ ಮಹಿಳೆಯರು, ದಲಿತರು ಮತ್ತು ಶೂದ್ರರ ಕೈಯಲ್ಲಿ ಹಣ ಇರಬಾರದು ಎಂದು ಹೇಳುತ್ತದೆ. ಅವರು ಸ್ವಾಭಿಮಾನದಿಂದ ಬದುಕಬಾರದು. ಅವರು ಪೂರ್ಣ ಸೇವಕರಾಗಿಯೇ ಇರಬೇಕು ಎಂದು ಹೇಳುತ್ತದೆ. ಇಂತಹ ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ RSS ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ.

ಮಹಾತ್ಮಾ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮಾ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಮತ್ತೆ ಅವರನ್ನು ಮತ್ತೆ ಮತ್ತೆ ಕೊಲ್ಲುವ ಕೆಲಸ ಮಾಡುತ್ತಿದೆ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!