Applications invited

ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ (Simple marriage) ಪ್ರೋತ್ಸಾಹ ಧನ (incentive) ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50 ಸಾವಿರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಸಮುದಾಯಗಳಿಗೆ ಸೇರಿದವರಾಗಿರಬೇಕು. ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.
ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರತಕ್ಕದ್ದಲ್ಲ.
ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.
ಜಿಲ್ಲಾ ನೋಂದಣಿ/ವಕ್ಸ್ ಬೋರ್ಡ್ ಕಛೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನದ ಟ್ರಸ್ಟ್ಗಳು, ಸಂಘಗಳು, ಸೊಸೈಟಿಗಳು, ವಕ್ಸ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS)(ಸ್ಥಿರ ಚಿತ್ರಗಳನ್ನು) ಸಲ್ಲಿಸುವುದು
ವಿಧವೆ ತಾಯಿಯ ಕುಟುಂಬ/ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು.

ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000/-ಗಳನ್ನು ನೀಡುವುದು.

ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ತಿಂಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ನಂ 216, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!