Bigg Boss bandh; Instructions to find solutions to problems: DCM D.K. Shivakumar

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜನಾರ್ದನ ರೆಡ್ಡಿ (Janardhana Reddy) ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ.

ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ.

ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ.

ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ. ಎಂದು ಹೇಳಿದರು.

“ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ” ಎಂದು ತಿಳಿಸಿದರು.

ಪ್ರಶ್ನೋತ್ತರ

ಶಾಸಕರಾದ ಭರತ್ ರೆಡ್ಡಿ ಅವರು ಮನೆಗೆ ಬೆಂಕಿ ಹಚ್ಚುವ ಬಗ್ಗೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ನೀವು ಅದನ್ನು ಒಪ್ಪುತ್ತೀರಾ ಎಂದು ಕೇಳಿದಾಗ, “ಯಾರೂ ಮನೆಗೆ ಬೆಂಕಿ ಹಚ್ಚುವುದಿಲ್ಲ. ಅದನ್ನು ಒಪ್ಪುವುದಿಲ್ಲ. ಮೊದಲು ಅವರ ಹೇಳಿಕೆ ಏನಿದೆ ಎಂದು ಪರಿಶೀಲನೆ ಮಾಡುತ್ತೇನೆ” ಎಂದರು.

ಜನಾರ್ದನ ರೆಡ್ಡಿ ಮನೆ ಮುಂದೆ ಭರತ್ ರೆಡ್ಡಿ ಬೆಂಬಲಿಗರು ಪೋಸ್ಟರ್ ಅಂಟಿಸಿದ್ದರ ಬಗ್ಗೆ ಕೇಳಿದಾಗ, “ಅಲ್ಲಿ ಭರತ್ ರೆಡ್ಡಿ ಇದ್ದರಾ? ಜನಾರ್ದನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಅವರ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ?” ಎಂದು ತಿಳಿಸಿದರು.

ಗುಂಡು ಹಾರಿಸಿರುವುದು ಸರಿಯೇ ಎಂದು ಕೇಳಿದಾಗ, “ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ಶಾಂತಿ, ನೆಮ್ಮದಿ ನೆಲೆಸುವುದು ಮುಖ್ಯ

ಎಸ್ಪಿ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಕೇಳಿದಾಗ, ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೇ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜತೆಗೂ ಮಾತನಾಡಿದ್ದೇನೆ.

ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ. ಬಳ್ಳಾರಿಯ ಜನ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದುಕೊಂಡಿದ್ದರು. ನಮಗೆ ಅದು ಮುಖ್ಯ. ಪಕ್ಷದ ಅಧ್ಯಕ್ಷನಾಗಿ ನನಗೆ ನನ್ನದೇ ಆದ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಕೋಟೆ ನಿರ್ಮಿಸಿಕೊಂಡವರನ್ನು ಯಾರು ತಾನೇ ಕೊಲ್ಲಲು ಹೋಗುತ್ತಾರೆ?

ನನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ.

ಜನಾರ್ಧನ ರೆಡ್ಡಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!