Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ

Astrology: ಮಂಗಳವಾರ,ಜನವರಿ 06, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ ದುಡಿಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.ನಿಮ್ಮ ಉದಾರ ವರ್ತನೆಯ ಲಾಭವನ್ನು ನಿಮ್ಮ ಸ್ನೇಹಿತರು ಪಡೆಯಲು ಬಿಡಬೇಡಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವುದಿಲ್ಲ. ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಗಣ್ಯ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ.ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನುಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ವೈಯಕ್ತಿಕ ವಿಷಯ ಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆ ಯಿಂದ ಕೆಲಸ ಕಾರ್ಯ ಗಳನ್ನು ಮಾಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ.
ಇಂದು ಲಾಭದಾಯಕ ದಿನ ವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ, ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆಯನ್ನು ಸದ್ಯಕ್ಕೆ ಬಿಡುವುದು ಉತ್ತಮ. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತೃತೀಯ/ಚತುರ್ಥಿ
ನಕ್ಷತ್ರ: ಆಶ್ಲೇಷ ನಕ್ಷತ್ರ

ಈ ದಿನದ ವಿಶೇಷ: ಶ್ರೀ ಸಂಕಷ್ಟಹರ ಚತುರ್ಥಿ, ಚಂದ್ರೋದಯ: ರಾತ್ರಿ 09:15

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="118314"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!