ದೊಡ್ಡಬಳ್ಳಾಪುರ: ತಾಲ್ಲೂಕಿನ ಜೆಡಿಎಸ್ (JDS) ಪಕ್ಷದ ಸಂಘಟನೆ ಹಾಗೂ ಬಲವರ್ಧನೆಯ ಕಾರ್ಯಕರ್ತರ ಸಭೆಯನ್ನು ಇದೇ ತಿಂಗಳ 10ರಂದು ನಗರದ ಒಕ್ಕಲಿಗರ ಸಮುದಾಯ ಭವದಲ್ಲಿ ಆಯೋಜಿಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ (Harish Gowda) ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯನ್ನು ದೊಡ್ಡಬಳ್ಳಾಪುರದಲ್ಲಿ ಆಯೋಜಿಸುವ ಉದ್ದೇಶ ಇರಲಿಲ್ಲ. ಆದರೆ ಡಿ.27 ರಂದು ಬೆಂಗಳೂರಿನಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಆದರೆ ಅಂದು ಕಾರ್ಯಕರ್ತರ ಸಂಖ್ಯೆ ಕಡಿಮೆ ಇದ್ದ ಕಾರಣ, ದೊಡ್ಡಬಳ್ಳಾಪುರದಲ್ಲಿ ಕಾರ್ಯಕರ್ತರೊಂದಿಗೆ ಮುಕ್ತವಾಗಿ ಮಾತನಾಡುವುದಾಗಿದೆ ತಿಳಿಸಿದ್ದಾರೆ.
ಈ ಸಭೆಯಲ್ಲಿ ಈ ಮುಂಚಿನ ಚುನಾವಣೆಗಳಲ್ಲಿ ಪಕ್ಷಕ್ಕೆ ಆಗಿರುವ ಏರಿಳಿದ ಕುರಿತು ಮಾಹಿತಿ ಪಡೆಯುವುದು, ಲೋಪದೋಷ ಕುರಿತಂತೆ ಚರ್ಚೆ ಮಾಡುವುದು. ಎನ್‌ಡಿಎ ಸೇರಿದ ಬಳಿಕ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಲಿದ್ದಾರೆ.
ಕಾರ್ಯಕರ್ತರು ಪಕ್ಷದ ಬೆನ್ನೆಲುಬು, ಕಾರ್ಯಕರ್ತರಿಂದ ಪಕ್ಷವೇ ಹೊರತು, ಕಾರ್ಯಕರ್ತರು ಯಾವುದೇ ವ್ಯಕ್ತಿಗಳ ಪರ ಇಲ್ಲ ಎಂಬ ನಿರ್ದೇಶನ ನೀಡಲಿದ್ದಾರೆ.
ಕಳೆದ ಜಾಲಪ್ಪ ಅವರು ಜೆಡಿಎಸ್ ಪಕ್ಷವನ್ನು ಬಿಟ್ಟ ಬಳಿಕ ಸುಮಾರು 20, 25 ವರ್ಷಗಳಿಂದಲೂ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ಅಲ್ಲಿಂದಲೂ ಮುಕ್ತವಾಗಿ ಪಕ್ಷದ ವರಿಷ್ಠರೊಂದಿಗೆ ಕಾರ್ಯಕರ್ತರು ಮಾತನಾಡಲು ಈ ಸುವರ್ಣ ಅವಕಾಶ ದೊರೆತಿದೆ ಎಂದರು.
ಎಲ್ಲಾ ಸ್ಥಾನಮಾನಗಳ ವಿಸರ್ಜನೆ
ಡಾ.ವಿಜಯ್ ಕುಮಾರ್ ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಹಳಷ್ಟು ಬೆಳವಣಿಗೆ ಆಗಿದೆ. ರಾಷ್ಟ್ರ ಮಟ್ಟದಲ್ಲಿ ಮತ್ತೆ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಮರು ಆಯ್ಕೆಯಾಗಿದ್ದಾರೆ.
ಪ್ರತಿ ಮೂರು ವರ್ಷಗಳಿಗೆ ಒಮ್ಮೆ ಪಕ್ಷ ಪದಾಧಿಕಾರಿಗಳು ಬದಲಾವಣೆ ಮಾಡುವ ನಿಟ್ಟಿನಲ್ಲಿ ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾ ರೆಡ್ಡಿ ನೇಮಕ ಮಾಡಲಾಗಿದ್ದು, ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಕುರಿತಂತೆ ಬಹಳಷ್ಟು ಸಭೆ ನಡೆಸಲಾಗುತ್ತಿದೆ.
ಈ ಕ್ಷಣಕ್ಕೆ ಕೋರ್ ಕಮಿಟಿ ಅಧ್ಯಕ್ಷರ ಪ್ರಕಾರ ನಮ್ಮ ಪಕ್ಷದಲ್ಲಿದ್ದ ಎಲ್ಲಾ ಸ್ಥಾನಮಾನಗಳನ್ನು ವಿಸರ್ಜನೆ ಮಾಡಲಾಗಿದೆ. ಮತ್ತೆ ಹೊಸದಾಗಿ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಲು, ಪಕ್ಷದ ಚಟುವಟಿಕೆಗಳ ಬಗ್ಗೆ, ಕಾರ್ಯಕರ್ತರಲ್ಲಿ ಹುರುಪನ್ನು ಮೂಡಿಸಲು ಇದೇ ತಿಂಗಳ 10 ರಂದು ಕಾರ್ಯಕರ್ತರ ಸಭೆಯಲ್ಲಿ ಆಯೋಹಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡರಾದ ತ.ನ.ಪ್ರಭುದೇವ್, ಸತ್ಯನಾರಾಯಣ, ಕೆಂಪರಾಜ್, ವಡ್ಡರಹಳ್ಳಿ ರವಿಕುಮಾರ್, ವಕೀಲರಾದ ಅಂಜನಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ಪ್ರವೀಣ್ ಶಾಂತಿನಗರ, ಅಶ್ವಥ್, ಮೆಳೇಕೋಟೆ ನಾಗೇಶ್ ಮತ್ತಿತರರಿದ್ದರು.