ಬೆಂ.ಗ್ರಾ.ಜಿಲ್ಲೆ: ರಾಜ್ಯಾದ್ಯಂತ ಡಿಜಿಟಲ್ ಇ-ಸ್ಟಾಂಪ್ (Digital e-stamp) ವ್ಯವಸ್ಥೆಯನ್ನು ಜಾರಿಗೊಳಿಸುವ ಸಂಬಂಧ ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ನೋಂದಣಿ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಛೇರಿಗಳಲ್ಲಿ ಜನವರಿ 09 ರಿಂದ 12 ವರೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ದೇವನಹಳ್ಳಿ ತಾಲ್ಲೂಕು ಉಪ ನೋಂದಣಿ ಕಚೇರಿಯ ತರಬೇತಿಯು ಜನವರಿ 09 ರಂದು ಬೆಳಿಗ್ಗೆ 11:00 ಗಂಟೆಗೆ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ರ ಕೋರ್ಟ್ ಆವರಣದಲ್ಲಿ ನಡೆಯಲಿದೆ.
ದೊಡ್ಡಬಳ್ಳಾಪುರ ಉಪ ನೋಂದಣಿ ಕಚೇರಿಯ ತರಬೇತಿಯು ಜ. 09 ರಂದು ಮಧ್ಯಾಹ್ನ 3:00 ಗಂಟೆಗೆ ಉಪ ನೋಂದಣಾಧಿಕಾರಿಗಳ ಕಚೇರಿ ಆವರಣ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ.
ನೆಲಮಂಗಲ ಉಪ ನೋಂದಣಿ ಕಚೇರಿಯ ತರಬೇತಿಯು ಜ.12 ರಂದು ಬೆಳಿಗ್ಗೆ 11.00 ಗಂಟೆಗೆ ಉಪನೋಂದಣಿ ಕಚೇರಿ ಆವರಣ ನೆಲಮಂಗಲ ಇಲ್ಲಿ ನಡೆಯಲಿದೆ.
ಹೊಸಕೋಟೆ ಉಪ ನೋಂದಣಿ ಕಚೇರಿಯ ತರಬೇತಿಯು ಜ. 12 ರಂದು ಮಧ್ಯಾಹ್ನ 3:00 ಗಂಟೆಗೆ ಉಪ ನೋಂದಣಿ ಕಚೇರಿ ಹೊಸಕೋಟೆಯಲ್ಲಿ ನಡೆಯಲಿದೆ.
ಡಿಜಿಟಲ್ ಇ-ಸ್ಟಾಂಪಿಂಗ್ ವ್ಯವಸ್ಥೆಯ ಕುರಿತ ತರಬೇತಿಯನ್ನು ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ SHCIL ಮೂಲಕ ವಿತರಿಸುತ್ತಿರುವ ಡಿಜಿಟಲ್ ಇ-ಸ್ಟಾಂಪಿಂಗ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಸೌಹಾರ್ದ ಬ್ಯಾಂಕ್ ಗಳ ಸಿಬ್ಬಂದಿಗಳಿಗೆ ಆಯೋಜಿಸಲಾಗಿದೆ.
ಸಂಬಂಧಿಸಿದವರು ಆಯಾ ತಾಲೂಕಿನ ವ್ಯಾಪ್ತಿಯ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.