DCM DK Shivakumar openly challenges Union Minister Prahlad Joshi

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಬೆಂಗಳೂರು: “ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸವಾಲೆಸೆದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ ಮಾಡಲು ಸಾಧ್ಯವಿಲ್ಲ, ಅವರು ನಿಜವಾಗಿಯೂ ಈ ರೀತಿ ಹೇಳಿದ್ದಾರಾ?” ಎಂದು ತಿಳಿಸಿದರು.

ಮನರೇಗಾ ಉಳಿಸಲು 2 ದಿನಗಳ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಕೇಳಿದಾಗ, “2 ದಿನ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್ಣ ಚರ್ಚೆ ಮಾಡಲಾಗುವುದು. ಬಿಜೆಪಿಯವರು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಅವರು ಸಮರ್ಥನೆ ಮಾಡಿಕೊಳ್ಳಲಿ, ಈ ಕಾರ್ಯಕ್ರಮದಿಂದ ಏನೆಲ್ಲಾ ಕೆಟ್ಟ ಪರಿಣಾಮ ಬೀರಲಿದೆ ಎಂದು ನಾವು ಹೇಳುತ್ತೇವೆ” ಎಂದು ತಿಳಿಸಿದರು.

ಕೇರಳದ ಮಲೆಯಾಳಂ ಭಾಷೆ ಬಿಲ್ ವಿಚಾರವಾಗಿ ಕೇಳಿದಾಗ, “ಈ ವಿಚಾರವಾಗಿ ನನಗೆ ಇನ್ನು ಸಂಪೂರ್ಣ ಮಾಹಿತಿ ಇಲ್ಲ” ಎಂದು ತಿಳಿಸಿದರು.

ನಿಮಗೆ ಸಿಕ್ಕಿರುವ ಅಧಿಕಾರ ನಮಗೆ ಸಿಕ್ಕಿಲ್ಲ ಎಂಬ ಕುಮಾರಸ್ವಾಮಿ ಅವರ ಟ್ವೀಟ್ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಅವರು ಖುಷಿಯಾಗಿ ಸಂತೋಷವಾಗಿರಲಿ” ಎಂದರು.

ಡಿಸಿಎಂ ಆದ ತಕ್ಷಣ ವಿಶೇಷ ಕೊಂಬು ಇರುವುದಿಲ್ಲ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಅವರ ಶಾಸಕರುಗಳು ಇದ್ದಾರಲ್ಲಾ ಅವರ ಮೂಲಕ ಈ ವಿಚಾರವನ್ನು ಚರ್ಚೆ ಮಾಡಲು ಹೇಳಲಿ” ಎಂದು ಹೇಳಿದರು.

ರಾಜಕೀಯ

ಮುಸ್ಲಿಮರು ಹಿಂದೂಗಳಂತೆಯೇ ನಮಗೆ ಪ್ರಿಯರು: ನಿತಿನ್ ಗಡ್ಕರಿ

ಮುಸ್ಲಿಮರು ಹಿಂದೂಗಳಂತೆಯೇ ನಮಗೆ ಪ್ರಿಯರು: ನಿತಿನ್ ಗಡ್ಕರಿ

ಬಿಜೆಪಿ (BJP) ಸಿದ್ಧಾಂತವು ಜಾತಿ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಕೆಲಸ ಮಾಡುವಂತೆ ಕಲಿಸುತ್ತದೆ ಮತ್ತು ಅದು ಮುಸ್ಲಿಮರ ವಿರುದ್ಧವಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

[ccc_my_favorite_select_button post_id="118311"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!