ದೊಡ್ಡಬಳ್ಳಾಪುರ; ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮಧ್ಯಾಹ್ನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ತೀವ್ರವಾಗಿ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದರು.
ಸಂಜೆ ತೂಬಗೆರೆ ರಸ್ತೆಯ ಕಾರನಾಳ ಕ್ರಾಸ್ ಬಳಿ ಸಂಭವಿಸಿದ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಕೆ ಆರ್ ಪುರಂನ ಕಿಶೋರ್ ಹಾಗೂ ಶ್ರೀಧರ್ ಎನ್ನುವವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಕಾರಿನಲ್ಲಿ ಕೆಆರ್ ಪುರಂನಿಂದ ನಂದಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣಗಳು ವರದಿಯಾಗಿದೆ.