ದೊಡ್ಡಬಳ್ಳಾಪುರ: ಕುಮಾರ್(Kumar) ಅವರ ರಾಜೀನಾಮೆಯಿಂದ ತೆರವಾಗಿದ್ದ ಹೆಗ್ಗಡಿಹಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ (Vice President) ಮಂಜುನಾಥ್ (Manjunath) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಚುನಾವಣೆ ಅಧಿಕಾರಿ ಅಮೃತ, ಸಹಾಯಕ ಚುನಾವಣೆ ಅಧಿಕಾರಿ ಸೌಮ್ಯ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.
ಈ ವೇಳೆ ಮಂಜುನಾಥ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಪ್ರಕ್ರಿಯೆಯಲ್ಲಿ 13 ಮಂದಿ ಸದಸ್ಯರು ಭಾಗಿಯಾಗಿದ್ದು, ಓರ್ವ ಗೈರಾಗಿದ್ದರು.
