ಪೂರ್ವ ತಯಾರಿ ಇಲ್ಲದೇ ದೊಡ್ಡಬಳ್ಳಾಪುರ ನಗರಸಭೆ ಬಜೆಟ್‌ ಸಭೆ; ಸಾರ್ವಜನಿಕರ ಆಕ್ರೋಶ

Budget meeting of Doddaballapur Municipal Council without prior preparation

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಪೂರ್ವ ತಯಾರಿ ಇಲ್ಲದೇ ಬಜೆಟ್‌ ಸಭೆ (Budget meeting) ನಡೆಸಲಾಗುತ್ತಿದ್ದು, ಸಭೆಯನ್ನು ಮುಂದೂಡಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ ಹಿನ್ನಲೆಯಲ್ಲಿ ನಗರದ ಡಾ.ರಾಜ್‌ಕುಮಾರ್‌ ಕಲಾಮಂದಿರ (ಪುರಭವನ)ದಲ್ಲಿ ನಗರಸಭೆ (Doddaballapur Municipal Council) ಅಧ್ಯಕ್ಷೆ ಸುಮಿತ್ರ. ಕೆ. ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಬೇಕಿದ್ದ 2026-27ನೇ ಸಾಲಿನ ಆಯ-ವ್ಯಯದ ಸಾರ್ವಜನಿಕ ಸಮಾಲೋಚನೆ ಸಭೆಯನ್ನು ಮುಂದೂಡಿದ ಪ್ರಸಂಗ ನಡೆದಿದೆ.

ಸಭೆಯಲ್ಲಿ ಭಾಗವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಬಿ.ಎಸ್‌.ಚಂದ್ರಶೇಖರ್, ಯುವ ಸಂಚಲನದ ಅಧ್ಯಕ್ಷ ಚಿದಾನಂದ ಮೂರ್ತಿ, ಕಸಾಪ ಮಾಜಿ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಹನುಮಂತರಾಯಪ್ಪ, ಚೌಡರಾಜ್‌, ಜನಪರ ಮಂಜು, ಮೊದಲಾದವರು ಮಾತನಾಡಿ, ಆಯ-ವ್ಯಯದ ಸಾರ್ವಜನಿಕ ಸಮಾಲೋಚನೆಯನ್ನು ನಿಯಮಾನುಸಾರ ಮಾಡದೇ ನಾಮಕಾವಸ್ತೆ ಮಾಡಲಾಗುತ್ತಿದೆ. ಇಂದಿನ ಸಭೆಗೆ ಸಭೆಯ ಅಜಂಡಾವನ್ನು ತಲುಪಿಸಿಲ್ಲ. ಹಿಂದಿನ ಬಜೆಟ್‌ ಮೀಟಿಂಗ್‌ನಲ್ಲಿ ಸಾರ್ವಜನಿಕರ ಸಲಹೆ ಸೂಚನೆಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ ಎನ್ನುವ ಬಗ್ಗೆ ಮಾಹಿತಿ ಇಲ್ಲ.

ಹಿಂದಿನ ಬಜೆಟ್‌ ನಡಾವಳಿಗಳನ್ನು ನಮಗೆ ತಿಳಿಸಿದರೆ ನಾವು ಮುಂದೆ ಮಾತನಾಡಲು ಅನುಕೂಲವಾಗುತ್ತದೆ. ಸಾರ್ವಜನಿಕ ಸಮಾಲೋಚನೆ ನಂತರ ಹಿಂದಿನ ವರ್ಷ ನಗರಸಭೆ ಅಧ್ಯಕ್ಷರು ಮಂಡಿಸಿದ ಬಜೆಟ್ ನಲ್ಲಿ ಎಷ್ಟು ಅಂಶಗಳು ಜಾರಿಯಾಗಿವೆ ಎನ್ನುವುದರ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ನೀಡಿ. ಯಾವುದೇ ಪೂರ್ವ ಸಿದ್ದತೆ ಇಲ್ಲದೇ ನಡೆಸುತ್ತಿರುವ ಈ ಸಭೆಯನ್ನು ಮುಂದೂಡಿ ಎಂದು ಒತ್ತಾಯಿಸಿದರು.

ಪೌರಾಯುಕ್ತ ಆರ್‌.ಕಾರ್ತಿಕೇಶ್ವರ ಮಾತನಾಡಿ, ಬಜೆಟ್‌ ಸಾರ್ವಜನಿಕ ಸಮಾಲೋಚನೆ ಸಭೆ ಕುರಿತು ಪ್ರಕಟಣೆ ನೀಡಲಾಗಿದೆ. ಬಜೆಟ್ ಬಗ್ಗೆ ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪರಿಗಣಿಸಲಾಗುವುದು. ಇಂದು ಸಭೆಯಲ್ಲಿ ನಿಮ್ಮ ಸಲಹೆಗಳನ್ನು ನೀಡಿ. ಆನಂತರ ಮತ್ತೊಂದು ಸಭೆಯಲ್ಲಿ ವಿಷದವಾಗಿ ಚರ್ಚೆ ನಡೆಸೋಣ ಎಂದರು.

ಆದರೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ಇಲ್ಲದೇ ಸಭೆ ನಡೆಸುವುದು ಸಮಂಜಸವಲ್ಲ. ಸಭೆಯನ್ನು ಮುಂದೂಡಿ ಎಂದು ಸಭೆಯಲ್ಲಿದ್ದ ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದಾಗ ಸಭೆಯನ್ನು ಮುಂದೂಡಿ, ಮುಂದಿನ ದಿನಾಂಕ ತಿಳಿಸುವುದಾಗಿ, ಪೌರಾಯುಕ್ತ ಆರ್‌.ಕಾರ್ತಿಕೇಶ್ವರ ತಿಳಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರ ಕೆ.ಆನಂದ್, ಉಪಾಧ್ಯಕ್ಷ ಎಂ.ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್. ರವಿಕುಮಾರ್, ಸದಸ್ಯರಾದ, ಟಿ.ಎನ್.ಪ್ರಭುದೇವ್, ಶಿವರಾಜ್, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]