ಬೆಂಗಳೂರು: ಬಿಗ್‌ಬಾಸ್ (BiggBoss) ಫಿನಾಲೆಗೆ ದಿನಗಣನೆ ಆರಂಭವಾಗಿದೆ. ಇದರ ನಡುವೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ಅವರು ಕಿಚ್ಚ ಸುದೀಪ್ (Sudeep) ಅವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಇಷ್ಟಕ್ಕೂ ಕರವೇ ನಾರಾಯಣಗೌಡರು ಅವರು ನಟ ಕಿಚ್ಚ ಸುದೀಪ್ (Kiccha Sudeep) ಅವರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಪುತ್ರನ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಲ್ಲಿಸುವ ಮೂಲಕ ಆತ್ಮೀಯ ಆಹ್ವಾನ ನೀಡಿದ್ದಾರೆ.
ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರು ನಟ ಕಿಚ್ಚ ಸುದೀಪ್ ಅವರ ನಿವಾಸಕ್ಕೆ ಭೇಟಿ ನೀಡಿ ಕನ್ನಡಪರ ಹೋರಾಟ, ಸಾಂಸ್ಕೃತಿಕ ಹೊಣೆಗಾರಿಕೆ ಹಾಗೂ ಚಿತ್ರರಂಗದ ಪಾತ್ರ ಕುರಿತು ಅರ್ಥಪೂರ್ಣ ಚರ್ಚೆ ನಡೆಸಿದರು.
— ಕರವೇ (KRV) (@karave_KRV) January 13, 2026
ಈ ಸಂದರ್ಭದಲ್ಲಿ ತಮ್ಮ ಪುತ್ರನ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯ ಆಹ್ವಾನ ನೀಡಿದರು.@KicchaSudeep #KRV pic.twitter.com/2inMRxllfz
ಈ ಕುರಿತಂತೆ ಕರವೇ ಸಾಮಾಜಿಕ ಜಾಲತಾಣದಲ್ಲಿ ಭೇಟಿಯ ಕಾರಣವನ್ನು ಫೋಸ್ಟ್ ಮಾಡಿದೆ.
ಇದರಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರು ನಟ ಕಿಚ್ಚ ಸುದೀಪ್ ಅವರ ನಿವಾಸಕ್ಕೆ ಭೇಟಿ ನೀಡಿ ಕನ್ನಡಪರ ಹೋರಾಟ, ಸಾಂಸ್ಕೃತಿಕ ಹೊಣೆಗಾರಿಕೆ ಹಾಗೂ ಚಿತ್ರರಂಗದ ಪಾತ್ರ ಕುರಿತು ಅರ್ಥಪೂರ್ಣ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ತಮ್ಮ ಪುತ್ರನ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯ ಆಹ್ವಾನ ನೀಡಿದರು ಎಂದು ಬರೆಯಲಾಗಿದೆ.
ಆದರೆ ಕರವೇ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ಅಶ್ವಿನಿ ಗೌಡ ಅವರು ಬಿಗ್ ಬಾಸ್ ನಲ್ಲಿ ಅಂತಿಮ ಹಂತಕ್ಕೆ ತಲುಪಿದ್ದಾರೆ. ಇದರ ನಡುವೆ ನಾರಾಯಣ ಗೌಡ ಅವರು ಬಿಗ್‌ಬಾಸ್ ನಿರೂಪಕ ಸುದೀಪ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಗೆಬಗೆಯ ಚರ್ಚೆಗೆ ಕಾರಣವಾಗಿದೆ.