ದಾವಣಗೆರೆ: ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ ತಾಲೂಕಿನ ಕಾಡ್ಡಜ್ಜಿ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಗಣಿ ಗಾರಿಕೆ ನಡೆಯುತ್ತಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಜ.12ರಂದು ರಂದು ಶಾಸಕ ಬಿ.ಪಿ.ಹರೀಶ್ ಅವರು ಕಾಡ್ಡಜ್ಜಿ ಗ್ರಾಮಕ್ಕೆ ತೆರಳಿದ್ದರು. ಅಲ್ಲಿ ಮಣ್ಣು ಸಾಗಾಟ ಮಾಡುವುದನ್ನು ನಿಲ್ಲಿಸುವಂತೆ ರೈತರಿಗೆ ಸೂಚಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮದ ರೈತ ಹಾಗೂ ಬಿ.ಪಿ. ಹರೀಶ್ ನಡುವೆ ವಾಗ್ವಾದ ನಡೆದಿತ್ತು. ಈ ಸಂದರ್ಭದಲ್ಲಿ ಶಾಸಕರು ಗ್ರಾಮದ ದಲಿತ ಸಮುದಾಯದ ಕಾಂತರಾಜ್ ಎಂಬುವವರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.