H.D. Kumaraswamy defends statement that there are terrorists in Vidhan Soudha

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಮಾರ್ಮಿಕವಾಗಿ ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಸಚಿವರು. ಕುಮಾರಸ್ವಾಮಿ ಅವರಿಗೆ ಮಾತನಾಡುವ ಚಪಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿರುವ ಮಾತಿಗೆ ಸಚಿವರು ತಿರುಗೇಟು ಕೊಟ್ಟರು.

ನಿಮ್ಮದೊಂದು ರೀತಿ‌ ಚಪಲ, ನನ್ನದೊಂದು ರೀತಿ ಚಪಲ. ನಿಮ್ಮದು ಹಣ ಮಾಡುವ ಚಪಲ. ನನ್ನದು ನಮ್ಮದು ಜನರ ಸಮ ಸ್ಪಂದಿಸಿ ಅವರ ಬೆಂಬಲ ಪಡೆಯುವ ಚಪಲ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಟೀಕಾಕಾರರಿಗೆ ಟಾಂಗ್ ಕೊಟ್ಟರು.

ಸ್ವಜಾತಿಯವರಿಂದಲೇ‌ ಅನ್ಯಾಯ ಆಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಾನು ಆ ವರದಿಯನ್ನು ನೋಡಿದ್ದೇನೆ. ಕಷ್ಟ ಬಂದ ಕ್ಯಾಸ್ಟ್ ಅಂತಾರೆ. ಆದರೆ ಅವರು ಅವರು ಪ್ರತಿನಿಧಿಸುವ ಜಾತಿಗೆ ಏನು ಮಾಡಿದ್ದಾರ ಬೆಳಗ್ಗೆಯಿಂದ ಸಂಜೆವರೆಗೂ‌ ಹಣ ಹೊಡೆಯಬೇಕು ಎನ್ನುವವರು ಅವರು. ಬೇಕು ಅಂತಾರೆ. ಜನರ ಬೆಂಬಲ ಯಾವ ರೀತಿ ಪಡೆಯಬೇಕು ಎನ್ನುವುದಕ್ಕಿಂತ ಕ್ಷಣ ಕ್ಷಣವೂ ರಾಜ್ಯದ ಲೂಟಿ ಮಾಡಬೇಕು ಎಂದು ಕೆಲಸ ಮಾಡ್ತಿದ್ದಾರೆ. ಅಂತಹ ವ್ಯಕ್ತಿಗಳಿಗೆ ಜಾತಿ ಹೆಸರಿನಲ್ಲಿ ಬೆಂಬಲ ಕೊಡ್ತಾರಾ? ಎಂದು ಅವರು ಟೀಕಿಸಿದರು.

ನಾನು ಬಾಯಿ ಚಪಲಕ್ಕೆ ಮಾತಾಡಲ್ಲ. ಇಂಥವರು ನಡೆಸುವ ಅಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ಕೊಡ್ತಿದ್ದೇನೆ ಅಷ್ಟೇ. ನಾನು ಮಾತನಾಡುವುದು ನನ್ನ ಮತ್ತು ಜನತೆಯ ಸಂಬಂಧ ಬೆಳೆಸಿಕೊಳ್ಳಲು. ಈ ಅಣ್ಣ ತಮ್ಮಂದಿರದ್ದು ಕಟ್ಟಿಕೊಂಡು ನನಗೇನಾಗಬೇಕು? ದಿನ ಬೆಳಗಾದರೆ ಯಾರ ತಲೆ ಒಡೆಯಬೇಕು? ಯಾರ ಜಮೀನಿಗೆ ಫೆನ್ಸಿಂಗ್ ಹಾಕಬೇಕು? ಯಾವ ರೀತಿ ಅಕ್ರಮವಾಗಿ ಸಂಪಾದನೆ ಮಾಡಬೇಕು ಎನ್ನುವ ಜಾತಿ ಹೆಸರು ಹೇಳಿದಾಕ್ಷಣ ಬೆಂಬಲ ಕೊಡ್ತಾರ? ಎಂದು ಖಾರವಾಗಿ ಪ್ರಶ್ನಿಸಿದರು.

ನಿಮ್ಮ ಪಕ್ಷದ ಹಣೆಬರಹ ನೋಡಿ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು

ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಕುಮಾರಸ್ವಾಮಿ ಅವರು; ನಮ್ಮ ಪಕ್ಷದ್ದು ಹಾಗಿರಲಿ. ಸೋಕಾಲ್ಡ್ ನ್ಯಾಷನಲ್ ಪಾರ್ಟಿ ಕಾಂಗ್ರೆಸ್ ಪಕ್ಷವು ಬಿಹಾರ, ಮಹಾರಾಷ್ಟ್ರದಲ್ಲಿ ಯಾವ ಲೆವೆಲ್ಲಿಗೆ ಬಂದಿದೆ ಎಂಬುದನ್ನು ಮೊದಲು ನೋಡಿಕೊಳ್ಳಿ ಎಂದು ತಿರುಗೇಟು ಕೊಟ್ಟರು.

ಜೆಡಿಎಸ್ ಬಗ್ಗೆ ಚರ್ಚೆ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಯಾರು? ಅವರ ಸರ್ಟಿಫಿಕೇಟ್ ನಮಗೆ ಬೇಕಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರುವ ಮಂತ್ರಿಗಳು ಎಷ್ಟು ಜನ ಜೆಡಿಎಸ್‌ನಿಂದ ಲೀಸ್ ಮೇಲೆ ಹೋಗಿದ್ದಾರೆ ಎನ್ನುವುದನ್ನು ಮೊದಲು ಅವರಪ್ಪನನ್ನು ಕೇಳಿ ತಿಳಿದುಕೊಳ್ಳಲಿ.

ಮುಖ್ಯಮಂತ್ರಿಗಳಿಂದ ಹಿಡಿದು ಎಷ್ಟು ಜನ ಮಂತ್ರಿಗಳು ಜೆಡಿಎಸ್ ಮೂಲದವರು? ಗೊತ್ತಿದೆಯಾ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಮಿಸ್ಟರ್ ಖರ್ಗೆ ಅವರೇ, ಮೊದಲು ನಿಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳಿ. ನಿಮ್ಮ ಪಕ್ಷದಲ್ಲಿ ಸದ್ಯಕ್ಕೆ ಒಬ್ಬರ ‘ಲೀಸ್ ಅವಧಿ ಮುಗಿದಿದೆ. ನನ್ನನ್ನು ಲೀಸ್ ಮೇಲೆ ಮುಖ್ಯಮಂತ್ರಿ ಮಾಡಿ’ ಎಂದು ಇನ್ನೊಬ್ಬರು ಟವೆಲ್ ಹಾಕಿದ್ದಾರೆ. ಅವರು ನೋಡಿದರೆ ನನ್ನ ಲೀಸ್‌ ಅವಧಿ ಇನ್ನೂ ಮುಗಿದಿಲ್ಲ. ಬಿಟ್ಟು ಕದಲುವ ಪ್ರಶ್ನೆಯೇ ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳುತ್ತಿದ್ದಾರೆ. ಇದೆಲ್ಲಾ ಏನು ಮರಿ ಖರ್ಗೆ ಅವರೇ? ಮೊದಲು ನಿಮ್ಮ ಪಕ್ಷದ ಹಣೆಬರಹ ನೋಡಿಕೊಳ್ಳಿ. ನಂತರ ಬೇರೆಯವರ ಬಗ್ಗೆ ಮಾತನಾಡಿ ಎಂದು ಕೇಂದ್ರ ಸಚಿವರು ಪ್ರಿಯಾಂಗ್ ಖರ್ಗೆಯನ್ನು ತರಾಟೆಗೆ ತೆಗೆದುಕೊಂಡರು.

ಇವತ್ತು ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದೆ. ಕಾಂಗ್ರೆಸ್ ಎಷ್ಟು ಕಡೆ ಗೆದ್ದಿದೆ. ದುರ ಅಹಂಕಾರ ಬೆಳೆಸಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಪಕ್ಷದ ರಾಜ್ಯದ ಫಲಿತಾಂಶವೇ ಸಾಕ್ಷಿ.

ಪ್ರಿಯಾಂಕ್ ಖರ್ಗೆ ಅವರೇ ಇಂಥ ವಿಷಯಗಳ ಬಗ್ಗೆ ಮಾತಾಡುವುದು ಬಿಟ್ಟು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ. ನಿಮ್ಮ, ನಿಮ್ಮ ತಂದೆಯವರು ಪ್ರತಿನಿಧಿಸಿರುವ ಕ್ಷೇತ್ರಗಳ ಪರಿಸ್ಥಿತಿ ಬಗ್ಗೆ ಹೇಳಿ. ಮೈಸೂರು, ಕನಕಪುರ ಮತ್ತು ರಾಮನಗರದಲ್ಲಿ ಆಗಿರುವ ಅಭಿವೃದ್ಧಿ ನಿಮ್ಮ ಕ್ಷೇತ್ರದಲ್ಲಿ ಆಗಿದೆಯೇ? ಹಿರಿಯ ಖರ್ಗೆ ಅವರು 40 ವರ್ಷಕ್ಕೂ ಹೆಚ್ಚು ಕಾಲದಿಂದ ಅಧಿಕಾರದಲ್ಲಿ ಇದ್ದಾರೆ. ನೀವು ಕಳೆದ 8-9 ವರ್ಷದಿಂದ ಮಂತ್ರಿ ಆಗಿದ್ದೀರಿ. ಏನು ಸಾಧನೆ ನಿಮ್ಮದು? ಪಟ್ಟಿ ಕೊಡಿ ನೋಡೋಣ ಎಂದು ಆಗ್ರಹಿಸಿದರು.

ಜೆಡಿಎಸ್‌- ಬಿಜೆಪಿ ಮೈತ್ರಿ ಕಾರಣಕ್ಕೆ ನಿಮಗೆ ನಿದ್ದೆ ಬರುತ್ತಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಮ್ಮ ಮೈತ್ರಿಯಿಂದ ನಿಮ್ಮ ಹಣೆಬರಹ 9 ಸೀಟುಗಳಿಗೆ ಬಂದಿದೆ. ನಮ್ಮ ಕೆಲ ದೋಷಗಳಿಂದ ನೀವು 9 ಸೀಟು ಗೆದ್ದಿದ್ದೀರಿ. ಇಲ್ಲದಿದ್ದರೆ ರಾಜ್ಯದಲ್ಲಿ ಅಧಿಕಾರ ಇದ್ದರೂ ನಿಮ್ಮ ನ್ಯಾಷನಲ್ ಪಾರ್ಟಿ 3 ಅಥವಾ 4 ಸೀಟುಗಳಿಗೆ ಇಳಿಯುತ್ತಿತ್ತು.

ಜೆಡಿಎಸ್ ಪಕ್ಷ ಅಸ್ತಿತ್ವ ಕಳೆದುಕೊಳ್ಳುತ್ತಿದೆಯೋ ಅಥವಾ ಕಾಂಗ್ರೆಸ್ ಪಕ್ಷ ನಾಶ ಆಗುತ್ತಿದೆಯೋ? ಹೇಳುವಿರಾ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಶಾಸಕ ಮೇಲೂರು ರವಿಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಕೇಂದ್ರ ಸಚಿವರ ಜತೆಯಲ್ಲಿ ಇದ್ದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!