Convinced the Governor about the Hate Speech Prevention Bill: R. Ashoka

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಆಡಳಿತದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಅಧಿಕಾರಿಗಳನ್ನು ನಿಂದಿಸುವ ಹಾಗೂ ಹಲ್ಲೆ ಮಾಡುವ ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ವಹಿಸಿ ಅಧಿಕಾರಿಗಳನ್ನು ರಕ್ಷಿಸಬೇಕೆಂದು ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಗೌಡ ಅವರನ್ನು ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದರೂ ಸಚಿವ ಕೆ.ಎಚ್‌.ಮುನಿಯಪ್ಪ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಆತ ಒಳ್ಳೆಯ ವ್ಯಕ್ತಿ, ಇದರಲ್ಲಿ ಮಹಿಳಾ ಅಧಿಕಾರಿಯದ್ದೇ ತಪ್ಪೆಂದು ಹೇಳಿದ್ದಾರೆ. ಕಳೆದೆರಡು ವರ್ಷಗಳ ಕಾಂಗ್ರೆಸ್‌ ಆಡಳಿತದಲ್ಲಿ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್‌ ಪುಂಡರು ಸರ್ಕಾರಿ ಕಚೇರಿಗಳನ್ನು ಪಕ್ಷದ ಕಚೇರಿ ಮಾಡಿಕೊಂಡಿದ್ದಾರೆ. ಆದ್ದರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಕಚೇರಿಗೆ ಕರೆಸಿ ಚರ್ಚಿಸಿ ಅವರಿಗೆ ನನ್ನ ವಿರೋಧವನ್ನು ತಿಳಿಸಿದ್ದೇನೆ. ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಿಮ್ಮ ಕರ್ತವ್ಯ ಎಂದು ಹೇಳಿದ್ದೇನೆ. ಹೀಗೆ ಮಾತನಾಡಿದವರು ಪರಾರಿಯಾಗಲು ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎಂದರು.

ಇದು ಮುಂದುವರಿದರೆ ಅಧಿಕಾರಿಗಳಿಗೆ ರಕ್ಷಣೆ ಇರುವುದಿಲ್ಲ. ತಪ್ಪಿಸ್ಥರಿಗೆ ಶಿಕ್ಷೆ ನೀಡಲು ಕ್ರಮ ವಹಿಸಬೇಕೆಂದು ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇವೆ. ಪಿಎಸ್‌ಐ ಪರಶುರಾಮ್‌, ನೌಕರ ರುದ್ರಣ್ಣ, ಗ್ರಂಥಪಾಲಕಿ ಭಾಗ್ಯವತಿ ಪ್ರಕರಣಗಳು, ಶಾಸಕ ಬಾಲಕೃಷ್ಣ ತಹಶೀಲ್ದಾರ್‌ಗೆ ಹೊಡೆಯುತ್ತೇನೆಂದು ಹೇಳಿರುವುದು, ಮೊದಲಾದ ಘಟನೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಿಲ್ಲ.

ಅಧಿಕಾರಿಗಳು ಒಂದೋ ಪ್ರತಿಭಟನೆ ಮಾಡಬೇಕು, ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಿದೆ. ಅಧಿಕಾರಿಗೆ ಯಾರಾದರೂ ಹಲ್ಲೆ ಮಾಡಿದರೆ ಮಾಧ್ಯಮಗಳ ಬಳಿ ಹೋಗಬಾರದು ಎಂದೇನಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಲ್ಲದ ಅಧಿಕಾರಿ ಮಾಧ್ಯಮಗಳ ಬಳಿ ಹೋದರೆ ಅದರಲ್ಲಿ ತಪ್ಪಿಲ್ಲ. ಶಾಸಕ ಸಿ.ಟಿ.ರವಿ ಅವರ ಪ್ರಕರಣದಲ್ಲಿ ಅವರನ್ನು ಬಂಧಿಸಿ ಕಾಡು ಸುತ್ತಿಸಿದ್ದರು. ಆದರೆ ಇಲ್ಲಿ ಯಾರನ್ನೂ ಬಂಧಿಸಿಲ್ಲ ಎಂದರು.

ಶನಿವಾರ ಬಳ್ಳಾರಿಗೆ ಭೇಟಿ ನೀಡಿ ಪ್ರತಿಭಟಿಸಲಿದ್ದೇನೆ. ಶಾಸಕರ ಮನೆ ಮೇಲೆ ಗುಂಡು ಹಾರಿಸುವ ಮಟ್ಟಿಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಗೃಹ ಇಲಾಖೆಗೆ ಅನುದಾನವಿಲ್ಲ, ಬಂದೋಬಸ್ತ್‌ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿದೆ. ಕಾನೂನು ಸರಿಯಿದ್ದರೆ ಹೊಸ ಉದ್ಯಮಗಳು ಬರುತ್ತವೆ. ಆದರೆ ಕಾನೂನು ಸುವ್ಯವಸ್ಥೆ ಇಲ್ಲವಾಗಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದರು.

ಜೆಬಿಎ ಚುನಾವಣೆಗೆ ಮುಂಬಯಿ ಫಲಿತಾಂಶ ದಾರಿದೀಪ

ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದು, ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಜಯ ದೊರೆಯಲಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇವಿಎಂ ಮೇಲೆ ಆರೋಪ ಮಾಡಿದ್ದಾರೆಯೇ ಹೊರತು ದಾಖಲೆ ನೀಡಿಲ್ಲ.

ಕಾಂಗ್ರೆಸ್‌ ಸೋತಿರುವಲ್ಲಿ ಮಾತ್ರ ವೋಟ್‌ ಚೋರಿ ಎನ್ನುತ್ತಾರೆ. ಕರ್ನಾಟಕ, ತೆಲಂಗಾಣದಲ್ಲಿ ಗೆದ್ದಾಗ ಆರೋಪ ಮಾಡಿಲ್ಲ. ಆದ್ದರಿಂದಲೇ ಅವರ ಮಾತು ಚಲಾವಣೆ ಇಲ್ಲದ ನಾಣ್ಯವಾಗಿದೆ. ಚುನಾವಣಾಧಿಕಾರಿಗಳು ವಿಶೇಷ ಪರಿಷ್ಕರಣೆ ಮೂಲಕ ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಯಿಂದ ಹೊರಗೆ ಕಳುಹಿಸುತ್ತಿದ್ದಾರೆ.

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಅಂತಹವರನ್ನು ಕಾಂಗ್ರೆಸ್‌ ಮತಕ್ಕಾಗಿ ಬಳಸಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ವಿಶೇಷ ಪರಿಷ್ಕರಣೆ ಮಾಡಿದರೆ ಅದನ್ನು ಬೆಂಬಲಿಸುತ್ತೇವೆ ಎಂದರು.

“Hello monetag”

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!