Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರ ಕೌಟುಂಬಿಕ ಜೀವನದಲ್ಲಿ ಸಂತಸ

Astrology: ಶನಿವಾರ, ಜನವರಿ 17, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ. ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ಬರುವ ಅಡೆ – ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮ ವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ
ನಕ್ಷತ್ರ: ಮೂಲ ನಕ್ಷತ್ರ

ಈ ದಿನದ ವಿಶೇಷ: ಚಿಕ್ಕಮಗಳೂರು ಜಿಲ್ಲೆ, ಕಡೂರ್ ತಾಲ್ಲೂಕಿನ ಸಖರಾಯಪಟ್ಟಣ ಶ್ರೀ ಶಕುನ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!