ಬೆಂ.ಗ್ರಾ. ಜಿಲ್ಲೆ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 2025-26 ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).
ಅರ್ಹ ಕ್ರೀಡಾಪಟುಗಳು https://sevasindhu.karnataka.gov.in ವೆಬ್ಸೈಟ್ ಮೂಲಕ ಜನವರಿ 31 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080-29787443/ 9845608598 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.