Police involved in 88 cases: Chief Minister Siddaramaiah upset

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.

2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು

ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತಾ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ.

ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಪೋಲೀಸ್ ಠಾಣೆಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಬೇಕು

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ

ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕು

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅವರು ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು.

ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ . ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ* ಕೈಗೊಳ್ಳಲಾಗುವುದು ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು ಅವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ, ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!