ಬೆಂಗಳೂರು: ಇಂದು ಬಿಗ್ ಬಾಗ್ ಕನ್ನಡ ಸೀಸನ್ 12 (Bigg Boss Kannada Season 12) ಅಂತ್ಯಗೊಳ್ಳಲಿದ್ದು, ವಿನ್ನರ್ ಯಾರು ಎನ್ನುವುದಕ್ಕೆ ತೆರೆಬಿಳಲಿದೆ.
ಗ್ರ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬಿಡದಿ ಬಳಿಯ ಬಿಗ್ ಬಾಸ್ ಮನೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್‌ನಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಸೀಸನ್-12 ಗ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿಬಿಗ್ ಬಾಸ್ ಮನೆ ಸುತ್ತಮುತ್ತ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ.
ಬಿಗ್ ಬಾಸ್ ಮನೆಯ ಮುಂಭಾಗ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಬಿಡದಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳದಲ್ಲೇ ನಿಯೋಜಿತರಾಗಿದ್ದಾರೆ. ಪ್ರವೇಶ ಮತ್ತು ನಿರ್ಗಮನ ಮಾರ್ಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.
ಇದರೊಂದಿಗೆ ಜಾಲಿವುಡ್ ಸ್ಟುಡಿಯೋಸ್ ಸುತ್ತಮುತ್ತ ಬಿಗ್ ಬಾಸ್ ಸ್ಪರ್ಧಿಗಳ ಕಟೌಟ್‌ಗಳು ರಾರಾಜಿಸುತ್ತಿದ್ದು, ಫಿನಾಲೆ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿವೆ.