I will serve the state until my last breath: Cmsiddaramaiah

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ( ವರುಣ): ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ ಹಕ್ಕು ಕೊಟ್ಟರು.ಅದನ್ನು ಕಿತ್ತುಹಾಕುತ್ತಿದ್ದಾರೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ.

ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿಜಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

MNREGA ಯೋಜನೆಯನ್ನು ಮುಂದುವರೆಸಲು ಹೋರಾಟ

ಕೇಂದ್ರ ಸರ್ಕಾರ ಇತೀಚೆಗೆ MNREGA ಬದಲಿಗೆ ವಿಬಿಜಿ ಗ್ರಾಮ್ ಜಿ ಎಂಬ ಕಾಯ್ದೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ನರೇಗಾ ಯೋಜನೆ ಇರುವುದಿಲ್ಲ.

ನಮ್ಮ ಸರ್ಕಾರ MNREGA ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಮೂರು ದಿನ ಕೆಲಸ ಕೊಡುವ ಕಾಯ್ದೆ.ಅದು ಸಂವಿಧಾನದ ಹಕ್ಕು. ಅದನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು ಹಾಕಲಾಗುತ್ತಿದೆ ಎಂದರು.

ವರುಣಾ ಕ್ಷೇತ್ರದಲ್ಲಿ ಒಟ್ಟು 1932 ಕೋಟಿ ರೂ.ಗಳ ಕಾಮಗಾರಿ

ಕುಪ್ಯಾ ಗ್ರಾಮದಲ್ಲಿ ಸುಮಾರು 323ಕೋಟಿ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ವರುಣಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

22/10/2024 ರಲ್ಲಿ 501 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ನಂತರ 9/8/2025 ರಂದು 1108 ಕೋಟಿ ರೂ ಗಳ ಕಾರ್ಯಕ್ರಮ. ಮತ್ತು ಇಂದು 323 ಕೋಟಿ ಸೇರಿದಂತೆ ಒಟ್ಟು 1932 ಕೋಟಿ ರೂ.ಗಳ ಕಾಮಗಾರಿಗಳಿಗೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. 1500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೆರವೇರಿಸಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳು

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ.

ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ

ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ. ಯತೀಂದ್ರ ಎಂದರು. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಡಾ: ಎಂ.ಸಿ.ಸುಧಾಕರ್, ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರು ಹಾಗೂ ರಾಜ್ಯ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮೇಲ್ಮನೆ ಸದಸ್ಯರಾದ ಡಾ: ತಿಮ್ಮಯ್ಯ, ಶಾಸಕ ರವಿಶಂಕರ್ ಸೇರಿ ಮೊದಲಾದವರು ಉಪಸ್ಥಿತರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!