ಬೆಂ.ಗ್ರಾ.ಜಿಲ್ಲೆ: 2024-25ನೇ ಸಾಲಿನ ಬಾಲ್ಯವಿವಾಹ (Child Marriage) ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ (Gram Panchayat) (ಬಾಲ್ಯವಿವಾಹ ಮುಕ್ತ ಗ್ರಾಪಂ) ರೂ 25,000/- ನಗದು ಪ್ರಶಸ್ತಿ ನೀಡಲಾಗುತ್ತಿದ್ದು, ಇದಕ್ಕಾಗಿ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಜಿಲ್ಲೆಯಿಂದ ಒಂದು ಗ್ರಾಮ ಪಂಚಾಯತಿ ಆಯ್ಕೆ ಮಾಡಲು ಆಯ್ಕೆ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 30ರಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆ “ಜಿಲ್ಲಾಡಳಿತ ಭವನ”, ಸಂ.206, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ -080-29560034 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.