ದೊಡ್ಡಬಳ್ಳಾಪುರ: ರಸ್ತೆ ದಾಟುತ್ತಿದ್ದ ಪಾದಾಚಾರಿ ವೃದ್ಧನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident), ಗಂಭೀರವಾಗಿ ಗಾಯಗೊಂಡ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ತಾಲೂಕಿನ ಕಂಟನಕುಂಟೆ ಬಳಿ ಸಂಭವಿಸಿದೆ.
ಮೃತರನ್ನು ನೆಲ್ಲುಕುಂಟೆ ಪಟೇಲಪ್ಪ (60 ವರ್ಷ) ಎಂದು ಗುರುತಿಸಲಾಗಿದೆ.
ಕಂಟನಕುಂಟೆ ಬಳಿ ರಾಜ್ಯ ಹೆದ್ದಾರಿ ರಸ್ತೆ ದಾಟುವ ವೇಳೆ ದೊಡ್ಡಬಳ್ಳಾಪುರ ಮಾರ್ಗವಾಗಿ ಗೌರಿಬಿದನೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಪಟೇಲಪ್ಪ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪಟೇಲಪ್ಪ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.