ದೊಡ್ಡಬಳ್ಳಾಪುರ: ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.
ಮೃತನನ್ನು ನಂದನ್ (21 ವರ್ಷ) ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಮಲಗುವ ಕೋಣೆಗೆ ತೆರಳಿದ ನಂದನ್ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.