7 child laborers rescued in Bashettihalli industrial area

ಧಿಡೀರ್ ದಾಳಿ.. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 7 ಬಾಲ ಕಾರ್ಮಿಕ ಮಕ್ಕಳ ರಕ್ಷಣೆ

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಶಶಿಧರ್ ಕೋಸಂಬೆ ಅವರ ನೇತೃತ್ವದಲ್ಲಿ ಧಿಡೀರ್ ದಾಳಿಯ ವೇಳೆ 7 ಬಾಲ ಕಾರ್ಮಿಕ ಮಕ್ಕಳ ರಕ್ಷಣೆ (Child laborers rescued) ಮಾಡಲಾಗಿದೆ.

ಅಸ್ಸಾಂ ಮೂಲದ 18 ವರ್ಷದೊಳಗಿನ ಮಕ್ಕಳ ರಕ್ಷಣೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಲಕ್ಷ್ಮೀ, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಪೊಲೀಸ್ ಇಲಾಖೆ ತಂಡದೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ರಕ್ಷಿಸಿದ ಮಕ್ಕಳನ್ನು ಮಕ್ಕಳ ರಕ್ಷಣಾ ಸಮಿತಿ ಮುಂದೆ ಹಾಜರು ಪಡಿಸಿ ಪುನರ್ವಸತಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಚಿಂತನೆ ‌ರೂಢಿಸಿಕೊಳ್ಳಿ: ಶಶಿಧರ ಕೋಸಂಬೆ

ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸಮಾಜದ ಕುರಿತು ಚಿಂತನೆ, ಕಾಳಜಿ ವಹಿಸಬೇಕು. ಇದರಿಂದ ನಮ್ಮ ಸಮಾಜ ಹಾಗೂ ದೇಶ ಅಭಿವೃದ್ಧಿ ಸಾಧಿಸಲು ಪೂರಕಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿರುವ ಅನಾಚಾರ, ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡುವಂತವರಾಗಬೇಕು.
ಸಮಾಜಕ್ಕೆ ಸತ್ಕಾರ್ಯಗಳನ್ನು ಮಾಡುವ ಗುಣವನ್ನು ವಿದ್ಯಾರ್ಥಿ ದೆಸೆಯಿಂದಲೆ ‌ರೂಢಿಸಿಕೊಳ್ಳಬೇಕು. ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದವರನ್ನು ಆದರ್ಶವಾಗಿಟ್ಟುಕೊಂಡು,ಅವರಂತೆ ನೀವೂ ಕೂಡ ಸಮಾಜ ಹಾಗೂ ದೇಶಕ್ಕೆ ಉತ್ತಮ ಕೊಡುಗೆ ನೀಡಿ ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲೆಗಳು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ರಕ್ಷಣೆಯ ಕೇಂದ್ರಗಳಾಗಬೇಕು. ಮಕ್ಕಳ ರಕ್ಷಣೆಗಾಗಿ ಕಾನೂನುಗಳು‌ ಜಾರಿಗೆ ಬಂದಿದೆ. ರಾಜ್ಯ ಮಕ್ಕಳ ಆಯೋಗವು ಸಂವಿಧಾನ್ಮತವಾಗಿ ರಚಿತವಾಗಿದ್ದು, ಮಕ್ಕಳು ಅನುಭವಿಸುತ್ತಿರುವ ಕಿರುಕುಳ ನಾವು ಗಮನಿಸುತ್ತಿದ್ದೇವೆ. ಮಕ್ಕಳು ಯಾವ ಸಮಸ್ಯೆ ಎದುರಿಸುತ್ತಿದ್ದಾರೆ, ಪರಿಹಾರ, ಮುಂಜಾಗ್ರತೆಯು ಆಯೋಗದ ಚಿಂತನೆಯಾಗಿದೆ. 18 ವರ್ಷದ ಕೆಳಗಿನ ಮಕ್ಕಳು ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು. ಮಕ್ಕಳ ಸೇವೆ ದೇವರ ಸೇವೆ ಎಂಬ ಚಿಂತನೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಮಕ್ಕಳು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಮಕ್ಕಳಿಗೆ ಸಹಾಯವಾಣಿಗೆ ಕರೆ ಮಾಡಲು‌ ಸೂಚಿಸಿದರು.

ಮಕ್ಕಳ ಅಹವಾಲು

ದೂರದ ಊರುಗಳಿಂದ ಬರುವೆವು ಬಸ್ ವ್ಯವಸ್ಥೆ ಇರುವುದಿಲ್ಲ, ಸರಿಯಾದ ಸಮಯಕ್ಕೆ ಶಾಲೆಗೆ ಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸೈಕಲ್ ನೀಡಿದರೆ ಅನುಕೂಲವಾಗಲಿದೆ ಎಂದು ಅನೇಕ ವಿದ್ಯಾರ್ಥಿಗಳು ಬೇಡಿಕೆ ಸಲ್ಲಿಸಿದರು. ಜೊತೆಗೆ ಶಿಕ್ಷಕರ ಕೊರತೆ, ಕಂಪ್ಯೂಟರ್ ವ್ಯವಸ್ಥೆ, ಶಾಲಾ ಕೊಠಡಿ ದುರಸ್ತಿ, ಮೂಲಭೂತ ಸೌಕರ್ಯಗಳು, ಬಾಶೆಟ್ಟಿಹಳ್ಳಿ ಬಳಿ ಸ್ಕೈವಾಕ್, ಶಾಲೆಯಿಂದ ಹೊರಗುಳಿದ ಮಕ್ಕಳ ರಕ್ಷಣೆ ಸೇರಿದಂತೆ ಇತರೆ ಸಮಸ್ಯೆಯ ಅಹವಾಲುಗಳನ್ನು ಸಲ್ಲಿಸಿದರು.

ತೆರೆದ ಮನೆ: ಜಾಗೃತಿ ಮೂಡಿಸಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು, ಮಕ್ಕಳಲ್ಲಿ ಪೊಲೀಸರ ಬಗ್ಗೆ ಇರುವ ಭಯವನ್ನು ಹೋಗಲಾಡಿಸಲು ಜಾರಿಗೆ ತಂದ ‘ತೆರೆದ ಮನೆ’ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಇಲ್ಲದೇ ಇರುವುದು ಬೇಸರ ಸಂಗತಿ, ಜಿಲ್ಲೆಯ ಪ್ರತಿ ಪೊಲೀಸ್ ಠಾಣೆಯಿಂದ ಪ್ರತಿ ಗುರುವಾರ ಸ್ಥಳೀಯ ಶಾಲಾ ಮಕ್ಕಳಿಗೆ ಠಾಣೆಗೆ ಕರೆಯಿಸಿ ಅಥವಾ ಶಾಲೆಗೆ ಪಿಎಸ್ಐ ನೇತೃತ್ವದ ಪೊಲೀಸರ ತಂಡ ತೆರಳಿ ಕಡ್ಡಾಯವಾಗಿ ತೆರೆದ ಮನೆ ಕಾರ್ಯಕ್ರಮದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಯನ್ನು ಬಿಟ್ಟ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಆ ವಿದ್ಯಾರ್ಥಿಯ ಮನೆ, ಅವರು ಕೆಲಸ ಮಾಡುವ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಲಕ್ಷ್ಮೀ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ರಾಜಣ್ಣ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!