Two and a half thousand crores of bribery is illegal in the Excise Department.. R. Ashoka alleges against the minister

ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ.. ಸಂವಿಧಾನದ ರಕ್ಷಕರು: ಆರ್.ಅಶೋಕ

ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R. Ashoka) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಫೆಡರಲ್ ವ್ಯವಸ್ಥೆಯ ಮೇಲೆ ನೇರ ದಾಳಿ ನಡೆಸುತ್ತಿದೆ” ಎಂದು ಹೇಳಿದರು.

ಸರ್ಕಾರದ ಪಠ್ಯಕ್ಕೆ ರಾಜ್ಯಪಾಲರು ಯಾಂತ್ರಿಕವಾಗಿ ಬದ್ಧರಾಗಬೇಕಿಲ್ಲ

“ಭಾರತದ ಸಂವಿಧಾನದ ವಿಧಿ 175 ಮತ್ತು 176ರ ಅಡಿಯಲ್ಲಿ ರಾಜ್ಯಪಾಲರಿಗೆ ವಿಧಾನಸಭೆ ಮತ್ತು ವಿಧಾನಪರಿಷತ್ತನ್ನು ಉದ್ದೇಶಿಸಿ ಭಾಷಣ ಮಾಡುವ ಸ್ಪಷ್ಟ ಅಧಿಕಾರವಿದೆ. ಆದರೆ ಸರ್ಕಾರ ತಯಾರಿಸಿದ ಪಠ್ಯದಲ್ಲಿರುವ ಪ್ರತಿಯೊಂದು ಪದವನ್ನೂ ರಾಜ್ಯಪಾಲರು ಕಡ್ಡಾಯವಾಗಿ ಓದಲೇಬೇಕು ಎಂಬ ನಿಯಮ ಸಂವಿಧಾನದಲ್ಲಿಯೂ ಇಲ್ಲ, ವಿಧಾನಸಭೆ ಅಥವಾ ವಿಧಾನಪರಿಷತ್ತಿನ ನಿಯಮಗಳಲ್ಲಿಯೂ ಇಲ್ಲ” ಎಂದು ಅಶೋಕ್ ಸ್ಪಷ್ಟಪಡಿಸಿದರು.

ಸಂವಿಧಾನದ ವಿಧಿ 163ರ ಪ್ರಕಾರ ರಾಜ್ಯಪಾಲರು ಸಾಮಾನ್ಯವಾಗಿ ಸಚಿವ ಸಂಪುಟದ ಸಲಹೆಯಂತೆ ಕಾರ್ಯನಿರ್ವಹಿಸಬೇಕಾದರೂ, ಅವರಿಗೆ ನಿರ್ದಿಷ್ಟ ವಿವೇಚನಾಧಿಕಾರವನ್ನೂ ಸಂವಿಧಾನವೇ ನೀಡಿದೆ. ಸರ್ಕಾರ ತಯಾರಿಸಿದ ಭಾಷಣದಲ್ಲಿ ಅಸಹ್ಯಕರ, ದ್ವೇಷಪೂರಿತ ಅಥವಾ ಸಂವಿಧಾನ ವಿರೋಧಿ ಅಂಶಗಳಿದ್ದರೆ, ಅವನ್ನು ಓದದೇ ಬಿಡುವುದು ರಾಜ್ಯಪಾಲರ ಸಂವಿಧಾನಾತ್ಮಕ ಹಕ್ಕು ಎಂದು ಅವರು ಹೇಳಿದರು.

“ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ಕಡ್ಡಾಯ ನಿಯಮವನ್ನು ಕಾಂಗ್ರೆಸ್ ತನ್ನದೇ ಸಂವಿಧಾನದಲ್ಲಿ ಬರೆದುಕೊಂಡಿದ್ದರೆ ಬೇರೆ ಮಾತು. ಆದರೆ ಭಾರತದ ಸಂವಿಧಾನದಲ್ಲಿ ಅಂತಹ ಯಾವುದೇ ವಿಧಿಯಿಲ್ಲ” ಎಂದು ಕಿಡಿಕಾರಿದರು.

ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕಾಂಗ್ರೆಸ್ ರಾಜಕೀಯ

ರಾಜ್ಯಪಾಲರು ಕೇಂದ್ರ ಮತ್ತು ರಾಜ್ಯಗಳ ನಡುವಿನ ಮಹತ್ವದ ಸಂವಿಧಾನಾತ್ಮಕ ಸೇತುವೆ ಎಂದು ಹೇಳಿದ ಅಶೋಕ್, ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ ಆ ಸೇತುವೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ನೀತಿ ಆಯೋಗದ ಸಭೆಗಳಿಗೆ ಗೈರು, ಜಿಎಸ್‌ಟಿ ಕೌನ್ಸಿಲ್ ಸಭೆಗಳಿಂದ ದೂರ ಉಳಿಯುವಿಕೆ, ಹಣಕಾಸು ಆಯೋಗದ ಮುಂದೆ ರಾಜ್ಯದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸದಿರುವುದು, ಈ ಮೂಲಕ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತಾವೇ ತಡೆದು, ನಂತರ ಕೇಂದ್ರದ ಮೇಲೆ ಆರೋಪ ಮಾಡುವುದೇ ಕಾಂಗ್ರೆಸ್‌ನ ರಾಜಕೀಯ ತಂತ್ರ ಎಂದು ಹೇಳಿದರು.

ಎಟಿಎಂ ಸರ್ಕಾರಕ್ಕೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯ

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆಡಳಿತಕ್ಕಿಂತ ರಾಜಕೀಯ ಸಂಘರ್ಷವನ್ನೇ ಸಾಧನೆಯೆಂದು ಬಿಂಬಿಸುತ್ತಿದೆ ಎಂದು ಅಶೋಕ್ ಆರೋಪಿಸಿದರು.

ಅಭಿವೃದ್ಧಿ ಕುಂಠಿತ

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಗುತ್ತಿಗೆದಾರರಿಗೆ ಪಾವತಿ ಮಾಡಲು ಸರ್ಕಾರದ ಬಳಿ ಹಣವಿಲ್ಲ.

ಭ್ರಷ್ಟಾಚಾರದ ಸರಮಾಲೆ

ಮುಡಾ ಹಗರಣ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ, 40% ಕಮಿಷನ್ ಆರೋಪಗಳು ಸರ್ಕಾರವನ್ನು ಜನರ ಮುಂದೆ ನಗ್ನಗೊಳಿಸಿವೆ.

ಗಮನ ಬೇರೆಡೆ ಸೆಳೆಯುವ ಯತ್ನ

ಈ ಹಗರಣಗಳಿಂದ ಜನರ ಗಮನ ತಪ್ಪಿಸಲು ರಾಜ್ಯಪಾಲರ ಭಾಷಣವನ್ನು ವಿವಾದಕ್ಕೆ ಎಳೆದು ತರುತ್ತಿದ್ದಾರೆ.

ಸುಳ್ಳು ಹೇಳುವುದು ಸರ್ಕಾರದ ಮ್ಯಾಂಡೇಟ್ ಅಲ್ಲ

“ಚುನಾಯಿತ ಸರ್ಕಾರಕ್ಕೆ ಜನರ ಸೇವೆ ಮಾಡುವ ಮ್ಯಾಂಡೇಟ್ ಇದೆಯೇ ಹೊರತು, ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸುವ ಅಧಿಕಾರವಿಲ್ಲ” ಎಂದು ಅಶೋಕ್ ಕಿಡಿಕಾರಿದರು.

ಎನ್‌ಇಪಿ ರದ್ಧತಿ, ತೆರಿಗೆ ಹಂಚಿಕೆ, ಅನುದಾನ ವಿಚಾರಗಳಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಪಠ್ಯದಲ್ಲಿ ಹಸಿ ಸುಳ್ಳುಗಳನ್ನು ಸೇರಿಸಿದೆ. ಸುಳ್ಳು ಹೇಳದಿರುವುದು ರಾಜ್ಯಪಾಲರ ಪರಮಾಧಿಕಾರ. ಅದನ್ನು ಅವರು ಬಳಸಿದಾಗ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುವುದು ಅವರ ರಾಜಕೀಯ ಹತಾಶೆಯನ್ನು ತೋರಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರ ಘನತೆಗೆ ಧಕ್ಕೆ – ಸಂವಿಧಾನಕ್ಕೆ ಅವಮಾನ

“ಈ ಸರ್ಕಾರ ಇಂದು ದಿವಾಳಿಯ ಅಂಚಿನಲ್ಲಿ ನಿಂತಿದೆ. ಜನರ ಮುಂದೆ ಹೋಗಲು ಮುಖವಿಲ್ಲದೆ, ರಾಜ್ಯಪಾಲರ ಉನ್ನತ ಹಾಗೂ ಗೌರವಾನ್ವಿತ ಹುದ್ದೆಯನ್ನು ರಾಜಕೀಯ ಜಿದ್ದಾಜಿದ್ದಿಗೆ ಎಳೆದು ತರುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ” ಎಂದು ಆರ್. ಅಶೋಕ್ ಎಚ್ಚರಿಸಿದರು.

ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಬಳಸಿರುವುದು ಸಂಪೂರ್ಣವಾಗಿ ಸಂವಿಧಾನಸಮ್ಮತ. ಇದನ್ನು ಪ್ರಶ್ನಿಸುವ ಕಾಂಗ್ರೆಸ್ ಸರ್ಕಾರ ಮೊದಲು ಸಂವಿಧಾನ ಓದಲಿ, ಅರ್ಥಮಾಡಿಕೊಳ್ಳಲಿ ಎಂದು ಅವರು ತೀವ್ರವಾಗಿ ಹೇಳಿದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!