ದೆಹಲಿ ಗಣರಾಜ್ಯೋತ್ಸವ -2026: ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ.. ವಿಶೇಷ ಏನು ಗೊತ್ತೆ..?

Delhi Republic Day -2026: Karnataka's tableau selected

ಕೆ.ಎಂ. ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು (Tableau) 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (Republic Day -2026) ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.

ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ.

ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.

ದೆಹಲಿ ಗಣರಾಜ್ಯೋತ್ಸವ -2026: ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ.. ವಿಶೇಷ ಏನು ಗೊತ್ತೆ..?

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ.

ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ.

ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.

ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ.

ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸಾರ್ಟ್ ಅಪ್ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ (2024 ಮತ್ತು 2026ರಲ್ಲಿ) ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಹೇಳಿದ್ದಾರೆ.

2026ರ ಜನವರಿ 26ರಂದು ನಡೆಯುವ ದೆಹಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು

  1. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ
  2. ಕರ್ನಾಟಕ ಪುಷ್ಪ ವೈಭವ
  3. ಹಲಗಲಿ ಬೇಡರು
    4.‘ಸಿರಿಧಾನ್ಯದಿಂದ ಮೈಕ್ರೋಚಿಪ್’ ವರೆಗೆ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು.

ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್‍ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ.

ವಿಷಯ ಆಯ್ಕೆಯ ಬಳಿಕ ಅದನ್ನು ವಿವಿಧ ಸ್ತರಗಳನ್ನು ನಿರೂಪಿಸಬೇಕಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದವು.

ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಬಿ. ಕಾವೇರಿ ಅವರ ಸಲಹೆ – ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯ ಆಯುಕ್ತರು ಹೇಳಿದರು.

ಸ್ತಬ್ಧಚಿತ್ರದಲ್ಲಿ ಏನಿರಲಿದೆ: ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತವಾಗಿ ಹೊಳೆಯುತ್ತಿದೆ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ.

ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್‍ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ.

ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ.

ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ.

ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿಂದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್‍ಗಳ ಮಧ್ಯೆ ರೋಬೋಟ್‍ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ.

ತೀವ್ರ ಪೈಪೋಟಿ: ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು.

ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯವು 2022ನೇ ಸಾಲಿನಿಂದ 15 ಕ್ಕೆ ಇಳಿಸಿದೆ.

2024ರಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಎಲ್ಲಾ ರಾಜ್ಯಗಳಿಗೂ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಕಲ್ಪಿಸಲು ಆವರ್ತನ ಮಾದರಿಯಲ್ಲಿ ಒಂದು ವರ್ಷ ಪಥಸಂಚಲನ ಮತ್ತು ಅದರ ಮುಂದಿನ ವರ್ಷ ಭಾರತ ಪರ್ವದಲ್ಲಿ ಪ್ರದರ್ಶಿಸುವಂತೆ ಎಲ್ಲಾ ರಾಜ್ಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಹೀಗಾಗಿ, ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 16 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಪ್ರಶಸ್ತಿಗಳ ಸರಮಾಲೆ: 2022ರಲ್ಲಿ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲುಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟಣದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು.

2005ರಲ್ಲಿ ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕ ದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು.

ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಆಯುಕ್ತರು ತಿಳಿಸಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]