Dandupalya gang associates arrested..!

ರೀಲ್ಸ್ ಹುಚ್ಚಿಗೆ ಟ್ರ್ಯಾಕ್ಟ‌ರ್ ಚಾಲಕ ಬಲಿ..!

ಕಲಬುರಗಿ: ಟ್ರ್ಯಾಕ್ಟ‌ರ್ ಚಾಲನೆ ವೇಳೆ ರೀಲ್ಸ್ (Reels) ಮಾಡುತ್ತಾ ಕೆಳಗೆ ಬಿದ್ದ ಚಾಲಕ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಲೋಕೇಶ್ ಕಲ್ಲಪ್ಪ ಪೂಜಾರಿ (20 ವರ್ಷ) ಎಂದು ಗುರುತಿಸಲಾಗಿದೆ.

ಟ್ರ್ಯಾಕ್ಟ‌ರ್ ಚಾಲಕ. ರೀಲ್ ಮಾಡುವ ಉದ್ದೇಶದಿಂದ ಲೋಕೆಶ್ ಕಬ್ಬಿನ ಗದ್ದೆಯಲ್ಲಿ ಸಿದ್ಧತೆ ನಡೆಸುತ್ತಾ, ಕೈಯಲ್ಲಿ ಮೊಬೈಲ್ ಹಿಡಿದು ಪೋಸ್ ಕೊಟ್ಟು ರೀಲ್ಸ್ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಆಯತಪ್ಪಿ ಬಿದ್ದಾಗ ಟ್ರ್ಯಾಕ್ಟರ್ ಚಕ್ರದ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸಂಬಂಧ ಮಹಾಗಾಂವ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10ನೇ ತರಗತಿಯಲ್ಲಿಯೇ ಟ್ರ್ಯಾಕ್ಟರ್ ಚಾಲನೆ ಕಲಿತಿದ್ದ ಲೋಕೇಶ್, ತಮ್ಮ ತಾಯಿಯೊಂದಿಗೆ ಜೀವನ ಸಾಗಿಸುತ್ತಿದ್ದ, ಕಳೆದ ಕೆಲ ತಿಂಗಳಿನಿಂದ ಇನ್‌ಸ್ಟಾದಲ್ಲಿ ಮಿಂಚಬೇಕು ಎಂಬ ಹುಚ್ಚಿಗೆ ಬಿದ್ದಿದ್ದ.

ಕಳೆದ ಕೆಲವು ತಿಂಗಳಿನಿಂದ ಲೋಕೇಶ್ ರೀಲ್ಸ್ ಮಾಡುತ್ತಿದ್ದರು. ಕಬ್ಬಿನ ಗದ್ದೆಯಲ್ಲಿ ಕೈಯಲ್ಲಿ ಮೊಬೈಲ್ ಹಿಡಿದು ಟ್ರ್ಯಾಕ್ಟ‌ರ್ ಚಾಲನೆ ಮಾಡುತ್ತಾ ರೀಲ್ ಮಾಡುವಾಗ ಅಪಘಾತ ಸಂಭವಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ.

ಅವಮಾನದಿಂದ ಆತ್ಮಹತ್ಯೆ: ಮಹಿಳೆಯ ಬಂಧನ

ವ್ಯಾಪಕ ಚರ್ಚೆಗೆ ಕಾರಣವಾಗಿರುವ ಕೇರಳದ ಕೋಯಿಕ್ಕೋಡ್‌ನ ಗೋವಿಂದಪುರದ ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಬುಧವಾರ ಬ್ಲಾಗರ್ ಶಿಂಜಿತಾ ಮುಸ್ತಫಾ ಅವರನ್ನು ಬಂಧಿಸಿದ್ದಾರೆ.

ಶಿಂಜಿತಾ ಬಸ್ಸಿನೊಳಗೆ ಅವಮಾನಿಸಿದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ಮಹಿಳೆಯನ್ನು ವಡಗರದಲ್ಲಿ ಬಂಧಿಸಿ, ಕೊಯಿಲಾಂಡಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಆಕೆಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಹಲವಾರು ಅಪರಾಧಗಳ ಆರೋಪ ಹೊರಿಸಲಾಗಿದೆ.

ದೀಪಕ್‌ಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸಾರ್ವಜನಿಕ ಪ್ರತಿಭಟನೆ ನಡೆದ ನಂತರ ಬಂಧನವಾಗಿದೆ.

ಶಿಂಜಿತಾಳ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳು ಅವರ ಸಾವಿಗೆ ನೇರ ಕಾರಣ ಎಂದು ದೀಪಕ್ ಅವರ ಕುಟುಂಬ ದೂರು ದಾಖಲಿಸಿದೆ. ಘಟನೆಯ ನಂತರ, ಶಿಂಜಿತಾ ತಲೆಮರೆಸಿ ಕೊಂಡಿದ್ದು, ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲು ಕಾರಣ ವಾಯಿತು.

ಸೈಬರ್ ಸೆಲ್ ಸಹಾಯದಿಂದ ಆಕೆ ಪತ್ತೆಯಾಗಿದ್ದಳು. ಖಾಸಗಿ ಬಸ್ಸಿನಲ್ಲಿ ದೀಪಕ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಿಂಜಿತಾ ಮುಸ್ತಫಾ ಆರೋಪಿಸಿದ್ದಳು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದಾದ ಬೆನ್ನಲ್ಲೇ ದೀಪಕ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!