There is no fear for JDS-BJP alliance: Nikhil Kumaraswamy

ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ಅಡ್ಡಿ ಆತಂಕ ಇಲ್ಲ; ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಜಿಲ್ಲಾ ಉಸ್ತುವಾರಿ ಮಂತ್ರಿಗಳು ಅವರ ಸ್ಥಾನಕ್ಕೆ ಶೋಭೆ ತರುವಂತ ಮಾತಗಳನ್ನಾಡಲಿ. ಅವರು ರಾಜಕೀಯವಾಗಿ ಬೆಳೆದು ಬಂದ ದಾರಿಯನ್ನ ಮರೆತಿದ್ದಾರೆ. ಆ ದಾರಿಯನ್ನ ಮರೆತಿರುವವರು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದರು.

ಮಂಡ್ಯದ ಹನಕೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.

ನಮಗೂ ನಾಲಿಗೆಯಿದೆ ಅವರ ತರ ಹರಿಬಿಡುವುದಿಲ್ಲ. ಸಮಯ ಬಂದಾಗ ಜಿಲ್ಲೆಯ ಜನ ಇದಕ್ಕೆ ಉತ್ತರ ಕೊಡ್ತಾರೆ. ಅವರು ಹೇಳಿಕೆ ಕೊಡುವುದಕ್ಕಿಂತ ಮುಂಚೆ ಯೋಚನೆ ಮಾಡಿ ಮಾತನಾಡಲಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಅನ್ನು ಓಡಿಸುವಂತ ಶಕ್ತಿ ಇರುವುದು ಜಿಲ್ಲೆಯ ಜನತೆಗೆ. ಯಾರನ್ನ ಜಿಲ್ಲೆಯಲ್ಲಿ ಉಳಿಸಿಕೊಬೇಕು ಯಾರನ್ನ ಕಳಿಸಬೇಕು ಎಂದು ಜಿಲ್ಲೆಯ ಜನ ತೀರ್ಮಾನಿಸುತ್ತಾರೆ. ಕಳೆದ ಎರಡೂವರೆ ವರ್ಷದ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ರಾಜ್ಯದ ಜನ ನೋಡಿದ್ದಾರೆ. ಇವತ್ತು ಗಲ್ಲಿ ಗಲ್ಲಿ ಗಲ್ಲಿಯಲ್ಲಿ ರಾಜ್ಯ ಸರ್ಕಾರವನ್ನು ಬಾಯಿಗೆ ಬಂದಂಗೆ ಬೈತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರ ಮಟ್ಟದ ನಾಯಕರೊಂದಿಗೆ ಮೈತ್ರಿ ಮಾತುಕತೆ ಆಗಿದೆ

ನಮ್ಮ ಬಿಜೆಪಿ ಮೈತ್ರಿ ಗಟ್ಟಿಯಾಗಿದೆ. ರಾಷ್ಟ್ರಮಟ್ಟದ ನಾಯಕರ ಜೊತೆ ನಮ್ಮ ಮೈತ್ರಿ ಆಗಿದೆ. ರಾಜ್ಯದಲ್ಲಿ ನಮ್ಮ ಬಿಜೆಪಿ ಮೈತ್ರಿಗೆ ಯಾವುದೇ ಅಡ್ಡಿ ಆತಂಕ ಇಲ್ಲ ಮೈತ್ರಿ ಗಟ್ಟಿಯಾಗಿದೆ. ಇಲ್ಲಿನ ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಕಳೆದುಕೊಳ್ಳೋ ಭೀತಿಯಲ್ಲಿ ಮೈತ್ರಿ ಬೇಡ ಅಂತಿದ್ದಾರೆ. ನಾವು ನೀವು ಮೈತ್ರಿ ಬಗ್ಗೆ ಚರ್ಚೆ ಮಾಡಿದ್ರೆ ಏನು ಸಿಗುವುದಿಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ಮಂಡ್ಯ ಜಿಲ್ಲೆಯ ಹನಕೆರೆ, ಬೂದನೂರು. ಕೊಮ್ಮೇರಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ ಕೋರಿದರು. ಕಾರ್ಯಕರ್ತರೊಂದಿಗೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡರು.

ಮಂಡ್ಯದ ಹನಕರೆ ಬಳಿ ಟ್ರ್ಯಾಕ್ಟರ್ ಗಳ ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿ, ಹಾರ ಹಾಕಿ ನಿಖಿಲ್ ಕುಮಾರಸ್ವಾಮಿ ಅವರನ್ನ ಜೆಡಿಎಸ್ ಕಾರ್ಯಕರ್ತರು ಹಾಗೂ ತಾಲ್ಲೂಕಿನ ಪ್ರಮುಖ ಮುಖಂಡರು ಅದ್ದೂರಿಯಾಗಿ ಸ್ಚಾಗತ ಕೋರಿದರು.

ನಂತರ ಮಂಡ್ಯ ಹುಲಿವಾನ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಲಭೈರವೇಶ್ವರಸ್ವಾಮಿ ಮಹಾದ್ವಾರ, ಶ್ರೀ ಹಿರಿದೇವಮ್ಮ ಶ್ರೀ ಅಚ್ಚಾಳಮ್ಮ ಮತ್ತು ಶ್ರೀ ಅಟ್ಟಿಲಕ್ಕಮ್ಮನವರ ದೇವಸ್ಥಾನ ಲೋಕಾರ್ಪಣೆ ಸಮಾರಂಭದಲ್ಲಿ ಗ್ರಾಮಸ್ಥರು ಎತ್ತಿನಗಾಡಿ ಮೂಲಕ ಅದ್ದೂರಿ ಸ್ವಾಗತ ಕೋರಿದರು.

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ಗ್ರಾಮಸ್ಥರು ಹಾಗೂ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ ಮಾಡಿದರು.

ನಗರಸಭೆ ಸೇರ್ಪಡೆ ಕೈಬಿಡಬೇಕು. ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಾವು ಗ್ರಾಮಸ್ಥರ ಜೊತೆ ಇರುತ್ತೇವೆ. ಜಯ ಸಿಕ್ಕುವವರೆಗೆ ಹೋರಾಟ ಮಾಡುತ್ತೇವೆ. ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ರೈತರರನ್ನು ಒಕ್ಕಲೆಬ್ಬಿಸುವುದನ್ನ ಬಿಟ್ಟು ರೈತರ ಅಭಿವೃದ್ಧಿ ಮಾಡಬೇಕು, ಹಳ್ಳಿಯ ಸೊಗಡನ್ನು ಉಳಿಸಬೇಕು, ವಾಸ್ತವ ಅಂಶಗಳನ್ನು ಅರಿತು ಕೆಲಸ ಮಾಡಬೇಕು. ಈ ವಿಷಯವನ್ನು ಅಧಿವೇಶನದಲ್ಲಿ ಚರ್ಚೆ ಮಾಡಿ ಈ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂದು ಮೈತ್ರಿ ಪಕ್ಷದ ಜತೆ ಮಾತನಾಡಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಈ ವಿಷಯವನ್ನು ಕೇಂದ್ರ ಸಚಿವರಾದ ಕುಮಾರಣ್ಣ ಅವರೊಂದಿಗೆ ಗಂಭೀರವಾಗಿ ಚರ್ಚಿಸುತ್ತೇನೆ. ಈ ಹೋರಾಟವನ್ನ ಅರ್ಧ ದಾರಿಯಲಿ ಬಿಟ್ಟು ಹೋಗುವ ಕೆಲಸ ಮಾಡುವುದಿಲ್ಲ, ಯಾವ ರೀತಿ ಪರಿಹಾರ ಮಾಡಬೇಕು ಎಂಬುದನ್ನು ಚರ್ಚಿಸಿ, ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗ್ರಾಮಸ್ಥರಿಗೆ ಧೈರ್ಯ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಿ‌ ಸಿ. ತಮ್ಮಣ್ಣ ಜಿಲ್ಲಾಧ್ಯಕ್ಷರಾದ ಡಿ. ರಮೇಶ್, ರೈತ ಹೋರಾಟಗಾರರದ ಶ್ರೀಮತಿ ಸುನಂದಾ ಜಯರಾಂ, ಮುಖಂಡರಾದ ಶ್ರೀ ಮಾದನಾಯಕನಹಳ್ಳಿ ರಾಜಣ್ಣ ಅವರು.ಮನ್ಮುಲ್ ಮಾಜಿ ಅಧ್ಯಕ್ಷರಾದ ರಾಮಚಂದ್ರು ಅವರು, ಪುರಸಭೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಅವರು ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!