16th National Voters Day; Distribution of ID cards to young voters

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ; ಯುವ ಮತದಾರರಿಗೆ ಗುರುತಿನ ಚೀಟಿ, ಬಿಎಲ್‌ಓ ಗಳಿಗೆ ಪರಿಕರ ವಿತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಮೈ ಭಾರತ್ ಇಲಾಖೆ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು (National Voters Day) ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಿ.ಎಸ್.ಶ್ರೀನಾಥಗೌಡ, ಸಂವಿಧಾನದ 324ನೇ ವಿಧಿಯನ್ವಯ ಸ್ಥಾಪಿಸಲಾದ ರಾಷ್ಟ್ರೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ಪ್ರಯುಕ್ತ 2011ನೇ ಸಾಲಿನಿಂದ ಪ್ರತಿ ವರ್ಷವು ಜನವರಿ-25 ರಂದು ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಆಯೋಜಿಸಲಾಗುತ್ತಿದೆ.

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ; ಯುವ ಮತದಾರರಿಗೆ ಗುರುತಿನ ಚೀಟಿ, ಬಿಎಲ್‌ಓ ಗಳಿಗೆ ಪರಿಕರ ವಿತರಣೆ

ಈ ಕಾರ್ಯದಲ್ಲಿ ಮತದಾನದ ಅರಿವು, ಯುವ ಮತದಾರರ ಹಕ್ಕುಗಳು ಮತ್ತು ಚುನಾವಣೆಯಲ್ಲಿ ಮತಗಟ್ಟೆಗೆ ಬರುವ ಮತದಾರರಿಗೆ ನೀಡುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದರೊಂದಿಗೆ ಅರ್ಥಪೂರ್ಣವಾಗಿ ಕಾರ್ಯಗಳನ್ನು ದೇಶವ್ಯಾಪಿ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಯೋಜನಾ ನಿರ್ದೇಶಕ ಹಾಗೂ ಸಹಾಯಕ ಮತದಾರ ನೋಂದಾಣಿಧಾರಿ ರಮೇಶ್, ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣದ ಧ್ವನಿಯಾಗಿ ಯುವ ಮತದಾರರು ಕಾರ್ಯನಿರ್ವಹಿಸಬೇಕಾಗಿದೆ. ಯಾವುದೇ ಚುನಾವಣೆಯನ್ನು ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೇ ನ್ಯಾಯಸಮ್ಮತವಾಗಿ ಮತ್ತು ವಿವೇಚನೆಯ ಮತದಾನ ಮಾಡಲು ಎಲ್ಲಾ ಯುವ ಮತದಾರರಿಗೆ ಕರೆ ನೀಡಿದರು.

ತಹಶಿಲ್ದಾರ್ ಅನಿಲ್ ಕುಮಾರ್ ಮಾತನಾಡಿ, ಎಲ್ಲಾ ಅರ್ಹ ಯುವ ಮತದಾರರು ಮತದಾರರಾಗಿ ನೋಂದಣಿ ಮಾಡಿಸಲು ಕಾಲಕಾಲಕ್ಕೆ ತಾಲ್ಲೂಕು ಆಡಳಿತದಿಂದ ವಿಶೇಷ ನೋಂದಣಿ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದೆ. ಅಲ್ಲದೆ ಅನ್ಲೈನ್ ನೋಂದಣಿಗೆ ಸಹ ಅವಕಾಶ ಕಲ್ಪಿಸಿರುವುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶ್.ಎನ್, ಜನರಿಗೆ ತಮ್ಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಿರುವ ಭಾರತವು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ‌. ಇಲ್ಲಿ ಮತದಾರರಿಗೆ ಪ್ರಭುಗಳಾಗಿದ್ದು, ಯಾವುದೇ ಆಸೆ, ಅಮಿಷಗಳಿಗೆ ಒಳಗಾಗದೇ ನ್ಯಾಯಸಮ್ಮತ ಮತದಾನ ಮಾಡಬೇಕಿದೆ.

ಚುನಾವಣೆಗೆ ವಿವೇಚನೆಯ ಮತದಾನ ಮಾಡಲು ಮತ್ತು ಎಲ್ಲಾ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸಿಕೊಳ್ಳುವ ಮೂಲಕ ದೇಶದ ಭವಿಷ್ಯದ ದೃಷ್ಠಿಯಿಂದ ಜಾಗೃತ ಮತದಾರರಾಗಿ ಯುವ ಮತದಾರರು ಪರಿವರ್ತನೆಗೊಳ್ಳಲು ಕರೆ ನೀಡಿದರು.

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ; ಯುವ ಮತದಾರರಿಗೆ ಗುರುತಿನ ಚೀಟಿ, ಬಿಎಲ್‌ಓ ಗಳಿಗೆ ಪರಿಕರ ವಿತರಣೆ

ಕಾರ್ಯಕ್ರಮ ಅಂಗವಾಗಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ಮತ್ತು ಬಿ.ಎಲ್.ಓ ಗಳಿಗೆ ಸಾಮಗ್ರಿಗಳನ್ನು ವಿತರಿಸಲಾಯಿತು.

ಮೈಭಾರತ್ ಸಂಸ್ಥೆಯ ಶ್ರೀವಾಣಿ, ದೇವನಹಳ್ಳಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಸಾದ್, ಮಂಜುಳ, ಸುನೀತಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಮಹಾಂತೇಶ್ಓಲೇಕಾರ್, ರಂಗಪ್ಪ, ಶರಣ್ಯ, ಎಂ.ಎಸ್.ಶ್ರೀಧರ್, ಸಿ.ಹಂಸ, ತಾಲ್ಲೂಕು ಪಂಚಾಯಿತಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!