National Voters' Day celebrated in Doddaballapura

ದೊಡ್ಡಬಳ್ಳಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ; ಜನಪ್ರತಿನಿಧಿಗಳನ್ನು ಪ್ರಶ್ನಿಸುವ, ಟೀಕಿಸುವ ನೈತಿಕ ಹಕ್ಕು ನಮ್ಮದು

ದೊಡ್ಡಬಳ್ಳಾಪುರ: ಪ್ರಜಾಪ್ರಭುತ್ವ ಆಡಳಿತಕ್ಕೆ ಅರ್ಥ ಬರಲು ಹಾಗೂ ಪ್ರಜಾಪ್ರಭುತ್ವದ ಆಶಯಗಳು ಈಡೇರಲು ಶೇ 100 ರಷ್ಟು ಮತದಾನ ನಡೆಯಬೇಕು. ಈ ಬಗ್ಗೆ ವಿದ್ಯಾವಂತ ಯುವ ಮತದಾರರು ಜಾಗೃತಿ ಮೂಡಿಸುವ ಹೊಣೆಗಾರಿಕೆ ಇದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾದೀಶರಾದ ಶಿಲ್ಪ ಹೇಳಿದರು.

ನಗರದ ಡಾ.ರಾಜ್‍ಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ನಡೆದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ (National Voters’ Day) ಅಂಗವಾಗಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಮತ ಚಲಾಯಿಸಿದರಷ್ಟೇ ನಮ್ಮ ಸೌಲಭ್ಯಗಳನ್ನು ಕೇಳುವ, ಜನಪ್ರತಿನಿಧಿಗಳನ್ನು ಟೀಕಿಸುವ ನೈತಿಕ ಹಕ್ಕು ನಮ್ಮದಾಗಿರುತ್ತದೆ.

ಯಾವುದೇ ರಾಜಕೀಯ ವ್ಯಕ್ತಿ ತಮ್ಮ ಮನೆಯಿಂದ ಹಣ ತಂದು ಮತದಾರರಿಗೆ ಹಂಚುವುದಿಲ್ಲ. ಜನರ ತೆರಿಗೆಯಲ್ಲಿನ ಹಣದಿಂದಲೇ ಸೀರೆ, ಹಣ ಹಂಚಲು ಸಾಧ್ಯ. ಇವುಗಳಿಗೆ ಮನಸೂತು ಮತ ಚಲಾಯಿಸಿದರೆ ನಮ್ಮ ಹಕ್ಕುಗಳನ್ನು ಕೇಳಿ ಪಡೆಯುವ ಅರ್ಹತೆ,ಜನಪ್ರತಿನಿಧಿಗಳನ್ನು ಪ್ರಶ್ನಿಸುವ ದ್ವನಿಯನ್ನೇ ಕಳೆದುಕೊಳ್ಳುತ್ತೇವೆ ಎಂದರು.

ವಿಶ್ವದ ಹಾಗೂ ನಮ್ಮ ದೇಶದ ನೆರೆ ಹೊರೆಯ ದೇಶಗಳಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಗಮನಿಸಿದರೆ ನಮ್ಮ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆ, ನಮ್ಮ ಸಂವಿಧಾನ ನೀಡಿರುವ ಹಕ್ಕುಗಳಿಂದ ನಾವು ಸದೃಢರಾಗಿದ್ದೇವೆ. ಇದು ಮತ್ತಷ್ಟು ಗಟ್ಟಿಗೊಳ್ಳಬೇಕಿದ್ದರೆ ಎಲ್ಲರಲ್ಲೂ ಮತದಾನ ಮಾಡುವ ಜಾಗೃತಿ ಮೂಡಬೇಕಿದೆ ಎಂದರು.

ಪೊಕ್ಸೋ ಕಾಯ್ದೆ ಹಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಇತರೆ ಕಿರುಕುಳವನ್ನು ತಪ್ಪಿಸಲು ಸಹಕಾರಿಯಾಗಿದೆ. ಈ ಕಾಯ್ದೆಯಡಿ ದೂರು ದಾಖಲಾದಾಗ ಸಂತ್ರಸ್ತೆಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ, ಗುರುತು ಬಹಿರಂಗವಾಗದಂತೆ ಕಾನೂನಿನ ರಕ್ಷಣೆ ಇದೆ. ಈ ಬಗ್ಗೆ ಜಾಗೃತಿ ಮುಖ್ಯ ಎಂದರು.

ಇದೇ ಸಂದರ್ಭದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿ, ಉತ್ತಮ ಪತಗಟ್ಟೆ ಅಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ ಹಾಗೂ ಮತದಾನ ಜಾಗೃತಿ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ, ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ, ನಗರಸಭೆ ಪರಿಸರ ಎಂಜಿನಿಯರ್ ಈರಣ್ಣ ಇದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!