ದೊಡ್ಡಬಳ್ಳಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜ್ಯೋತ್ಸವ (Hindu Samajyotsava) ಸಮಿತಿ ಅಡಿಯಲ್ಲಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಅಂಗವಾಗಿ ಬುಧವಾರ ಸಂಜೆ ಬೈಕ್ ರ‍್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ನಗರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ಆರಂಭಗೊಂಡ ಬೈಕ್ ಯಾರ್ಲಿ ಡಿ.ಕ್ರಾಸ್, ಗಾಂಧಿ ವೃತ್ತ, ತೇರಿನ ಬೀದಿ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ತಾಲ್ಲೂಕು ಕಚೇರಿ ಮೂಲಕ ಭಗತ್ ಸಿಂಗ್ ಕ್ರೀಡಾಂಗಣ ತಲುಪಿತು.
ಜ. 29ಕ್ಕೆ ಶೋಭಾಯಾತ್ರೆ
ಜ.29 ರಂದು ಬೆಳಿಗ್ಗೆ 8 ಗಂಟೆಗೆ ತಾಲ್ಲೂಕಿನ ಎಲ್ಲಾ ಶಕ್ತಿ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ನಂತರ ಸುದರ್ಶನ ಹೋಮ ನಡೆಯಲಿದೆ. ತಾಲ್ಲೂಕಿನ ವಿವಿಧ ಭಜನಾ ಮಂಡಳಿಗಳಿಂದ ‘ಭಕ್ತಿ ಪಾರಾಯಣ’ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ , ಪ್ರಸಾದ ವಿನಿಯೋಗವಿದೆ.
ಜ.29 ರಂದು ಮಧ್ಯಾಹ್ನ 2.30ಕ್ಕೆ ನಗರದ ನೆಲದಾಂಜನೇಯ ದೇವಾಲಯದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ನಂತರ ಸಂಜೆ 5 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಸಾನಿಧ್ಯವನ್ನು ಹಂಪಿ ಹೇಮಕೂಟ ಗಾಯತ್ರಿ ಪೀಠ ಮಹಾಸಂಸ್ಥಾನ ಮತ್ತು ದೇವಾಂಗ ಜಗದ್ಗುರು ದಯಾನಂದಪುರಿ ಮಹಾಸ್ವಾಮೀಜಿ, ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ವಹಿಸಲಿದ್ದಾರೆ.
ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಡೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.