ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ (sports meet) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ಜನವರಿ 30(ಶುಕ್ರವಾರ) ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಹಾಗೂ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ ಬಚ್ಚೇಗೌಡಘನ ಉಪಸ್ಥಿತಿಯಲ್ಲಿ ವಹಿಸಿಕೊಳ್ಳಲಿದ್ದಾರೆ.
ಕ್ರೀಡಾ ಜ್ಯೋತಿ ಸ್ವೀಕಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರು ಸ್ವೀಕರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿ ಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ವಿಧಾನಸಭಾ ಶಾಸಕರಾದ ಎನ್.ಶ್ರೀನಿವಾಸ್. ಬೆಂಗಳೂರು ಗ್ರಾಮಾಂತರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ರಾಜಣ್ಣ, ದೇವನಹಳ್ಳಿಯ ಬೆಂಗಳೂರು ಅಂತರಾಷ್ಟೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ. ಶಾಂತ ಕುಮಾರ್, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಸಿ. ಜಗನ್ನಾಥ್, ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಿ.ಸಿ.ಜಾಫರ್ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಹನುಮಂತರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರು ಹಾಗೂ ದೇವನಹಳ್ಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಿ.ಎಸ್. ಶ್ರೀನಾಥಗೌಡ ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ವೃಂದದ ಸಂಘಗಳ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಚಂದ್ರಕಾಂತ್ ಎಂ.ವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಗೀತಾ ಆರ್, ದೊಡ್ಡಬಳ್ಳಾಪುರ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷರಾದ ರಾಜಶೇಖರ್ ಎಂ.ಎಸ್, ನೆಲಮಂಗಲ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷರಾದ ನಾಗೇಶ್ ಕೆ.ಎನ್, ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಬೈರೇಗೌಡ ಬಿ.ಪಿ, ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಉಮಾಶಂಕರ್ ಎಲ್.ಎಂ, ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ನಾರಾಯಣ ಗೌಡ, ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಆದರ್ಶ ಬಿ ಉಪಸ್ಥಿತರಿರುವರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)