ದೊಡ್ಡಬಳ್ಳಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ (Mahatma Gandhi) ಹುತಾತ್ಮ ದಿನದ ಅಂಗವಾಗಿ ನಗರದ ನ್ಯಾಯಾಲಯದ (Court) ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಪ್ರತಿವರ್ಷ ಜನವರಿ 30ನ್ನು ಹುತಾತ್ಮ ದಿನವೆಂದು ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡು, ಮೌನಚರಣೆಯ ಮೂಲಕ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಲಾಯಿತು.

ಈ ವೇಳೆ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ನಿರ್ಮಲ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್. ಎ. ಶಿಲ್ಪ, ಪ್ರಧಾನ ಸಿವಿಲ್ ಅಪರ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಪ್ರವೀಣ್. ಅರ್. ಜೆ.ಎಸ್., ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್, ಅಪರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ.ಕೆ., 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ರವಿಬೆಟಗಾರ್.

ದೊಡ್ಡಬಳ್ಳಾಪುರ ವಕೀಲರ ಸಂಘದ ಅಧ್ಯಕ್ಷರಾದ ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಕನಕ ರಾಜ್, ಉಪಾಧ್ಯಕ್ಷ ಜಗನ್ನಾಥ್.ಕೆ., ಖಜಾಂಚಿ ಗೀತಾ.ಆರ್., ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಸೇರಿದಂತೆ ಸಂಘದ ಪದಾಧಿಕಾರಿಗಳು, ವಕೀಲ ಭಾಗವಹಿಸಿದ್ದರು.