None of the BJP MPs or Union Ministers have raised their voice: D.K. Shivakumar

ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ.. ಬಿಜಿಪಿ ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: “ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ವ್ಯಂಗ್ಯವಾಡಿದರು.

ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ” ಎಂದು ತಿವಿದರು.

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು.

ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ.

ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ.

ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ” ಎಂದರು.

ಮಂಗನ ಖಾಯಿಲೆಯಿಂದ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ಪರಿಶೀಲಿಸಿ ತಿಳಿಸುತ್ತೇನೆ” ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!